KPCC ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಚ್ 10ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ..

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. KPCC ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಹಿನ್ನೆಲೆ, ಉಪಮುಖ್ಯಮಂತ್ರಿ D. K. Shivakumar ಮಾರ್ಚ್ 10ರಂದು ಪಕ್ಷದ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಔತಣಕೂಟ
ಈ ವಿಶೇಷ ಡಿನ್ನರ್ ಪಾರ್ಟಿಯನ್ನು Bengaluru ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳ ಪೂರೈಕೆ ಸಾಧಿಸಿದ ಹಿನ್ನೆಲೆಯಲ್ಲಿ, ಪಕ್ಷದ ಏಕತೆಯನ್ನು ಬಲಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ : Bengaluru| ಡ್ರ್ಯಾಗರ್ನಿಂದ ಇರಿದು ವ್ಯಕ್ತಿಯ ಬರ್ಬರ Murder?

ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಮುಖರಿಗೆ ಆಹ್ವಾನ
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ Siddaramaiah, ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಆಹ್ವಾನ ನೀಡಲಾಗಿದೆ.
ಇದರ ಮೂಲಕ ಪಕ್ಷದೊಳಗಿನ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಲು ಡಿಸಿಎಂ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬಜೆಟ್ ನಂತರ ರಾಜಕೀಯ ಬದಲಾವಣೆ?
ಇದಲ್ಲದೆ, ಬಜೆಟ್ ನಂತರ ರಾಜ್ಯ ರಾಜಕೀಯದಲ್ಲಿ ಕೆಲವು ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ.
ಆದ್ದರಿಂದ, ಈ ಡಿನ್ನರ್ ಪಾರ್ಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ಇದನ್ನು ನೋಡಿ : ಮುಂದೆ ಮೈತ್ರಿ ಅಧಿಕಾರಕ್ಕೆ ಬಂದ್ರೆ ಗ್ಯಾರಂಟಿ ಯೋಜನೆ ಸಿಗುತ್ತಾ..?




