ಅತ್ತೆಯ ಕಿರುಕುಳ ತಾಳಲಾರದೆ 35 ವರ್ಷದ ಮಹಿಳೆಯೊಬ್ಬರು Suicide ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಲ್ಲಿ ಕೌಟುಂಬಿಕ ಕಲಹ ಮತ್ತು ಅತ್ತೆಯ ಕಿರುಕುಳ ತಾಳಲಾರದೇ 35 ವರ್ಷದ ಮಾಜಿ ಐಟಿ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸುಷ್ಮಾ (35) ಎಂದು ಗುರುತಿಸಲಾಗಿದೆ. ಸುಷ್ಮಾ ಈ ಹಿಂದೆ ಬಹುರಾಷ್ಟ್ರೀಯ ಕಂಪನಿ Dellನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಜಗಳ
ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಪೊಲೀಸರ ಮಾಹಿತಿ ಪ್ರಕಾರ, ಕುಟುಂಬದಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ತಿಳಿದುಬಂದಿದೆ.

READ THIS : ಖುಷಿಯಲ್ಲಿದ್ದ RCB ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ – ಏನದು?
ಮಂಗಳವಾರ ಅಡುಗೆ ಮಾಡುವ ವಿಚಾರವಾಗಿ ಸುಷ್ಮಾ ಮತ್ತು ಅತ್ತೆ ಕಲ್ಪನಾ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ಘಟನೆ ಬಳಿಕ ಮನನೊಂದು ಸುಷ್ಮಾ ಮನೆಯಲ್ಲಿ ನೇಣು ಬಿಗಿದುಕೊಂಡು Suicide ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಪೋಷಕರ ಗಂಭೀರ ಆರೋಪ
ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಸುಷ್ಮಾ ಅವರ ಪೋಷಕರು, ಗಂಡನ ಮನೆಯವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ಅತ್ತೆ ಕಲ್ಪನಾ ಸುಷ್ಮಾಗೆ ಉದ್ದೇಶಪೂರ್ವಕವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಅಡುಗೆ ಮಾಡಲು ಬಿಡದೇ, ಸಣ್ಣಪುಟ್ಟ ವಿಚಾರಗಳಿಗೂ ಜಗಳ ತೆಗೆದು ಕಿರುಕುಳ ನೀಡುತ್ತಿದ್ದರು” ಎಂದು ದೂರಿದ್ದಾರೆ.

ವರದಕ್ಷಿಣೆ ಕಿರುಕುಳ..? – Suicide
ಘಟನೆ ಬಳಿಕ ಸುಷ್ಮಾ ಅವರ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪದಡಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಇತ್ತ ಘಟನೆ ಬಳಿಕ ತಲೆಮರೆಸಿಕೊಂಡಿರುವ ಅತ್ತೆ ಕಲ್ಪನಾ ಅವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಸದ್ಯ ಪೊಲೀಸ್ ತನಿಖೆ ಮುಂದುವರಿದಿದೆ.
MUST WATCH : ತುಮಕೂರಿನಲ್ಲಿ ಜೆಸಿಬಿ ಘರ್ಜನೆ ಫುಟ್ಪಾತ್ ಒತ್ತುವರಿ ತೆರವು | TUMAKURU NEWS




