ಆಂಧ್ರಪ್ರದೇಶದ ಪಲಮನೇರು ಸಮೀಪ ಕಂಟೇನರ್ಗೆ ಕಾರು ಡಿಕ್ಕಿ ಹೊಡೆದು Bengaluru ನ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಅಪಘಾತ.

ಭೀಕರ ರಸ್ತೆ ಅಪಘಾತದಲ್ಲಿ Bengaluru ನ ಐವರು ಮೃತಪಟ್ಟಿರುವ ದುಃಖದ ಘಟನೆ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಪಲಮನೇರು ಸಮೀಪದ ಗಂಗವರಂ ಬಳಿ ಈ ದುರಂತ ಸಂಭವಿಸಿದೆ.

READ THIS : ಸ್ನೇಹಿತನಿಗೆ ಚಟ್ಟ ಕಟ್ಟಲು ಮುಂದಾದ್ನ? – ಮಚ್ಚಿನಿಂದ ಕೊಚ್ಚಿ ಕೊಚ್ಚಿ ಹಲ್ಲೆ
ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ
ಬೆಂಗಳೂರುದಿಂದ ತಿರುಪತಿಗೆ ತೆರಳುತ್ತಿದ್ದ ಕಾರು, ಮುಂಭಾಗದಲ್ಲಿ ಸಾಗುತ್ತಿದ್ದ ಕಂಟೇನರ್ಗೆ ಹಿಂಬದಿಯಿಂದ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟೋ ಭೀಕರವಾಗಿದ್ದರಿಂದ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಈ ದುರ್ಘಟನೆ ಮತ್ತೊಮ್ಮೆ ವೇಗ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆ ನಿಯಮಗಳ ಪಾಲನೆಯ ಅಗತ್ಯವನ್ನು ಒತ್ತಿಹೇಳುತ್ತದೆ.
MUST WATCH : YADAGIRI|ಕುಡಿದ ಮತ್ತಲ್ಲಿ ಸ್ನೇಹಿತರ ಮಧ್ಯೆ ಗಲಾಟೆ ಇಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯ




