
BANGALORE: ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆ (Caste Survey)ಗೆ ಮಧ್ಯಂತರ ತಡೆ ನೀಡುವಲ್ಲಿ ಹೈಕೋರ್ಟ್ ನಿರಾಕರಿಸಿದ್ದು, ರಾಜ್ಯ ಸರ್ಕಾರಕ್ಕೆ ಮಹತ್ವದ ರಿಲೀಫ್ ನೀಡಿದೆ.
ಹೌದು..ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠದಲ್ಲಿ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ರಾಜ್ಯ ಒಕ್ಕಲಿಗರ ಸಂಘ ಸೇರಿದಂತೆ ಹಲವು ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಯಿತು. ವಿಚಾರಣೆ ವೇಳೆ, ಜಾತಿ ಸಮೀಕ್ಷೆಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದರೂ, ರಾಜ್ಯ ಸರ್ಕಾರ ತನ್ನ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿತು.
ಇನ್ನು ನ್ಯಾಯಾಲಯ “ಸಮೀಕ್ಷೆ ನಿಷೇಧಿಸಲಾಗದು” ಎಂದು ಸ್ಪಷ್ಟಪಡಿಸಿ, ಡಿಸೆಂಬರ್ ಮೊದಲ ವಾರಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದ್ದು. ಆದಾಗ್ಯೂ, ಕೋರ್ಟ್ ಕೆಲ ಮಹತ್ವದ ಷರತ್ತುಗಳನ್ನು ವಿಧಿಸಿದೆ. ಅದೇನೆಂದರೆ
- ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ, ಗೌಪ್ಯವಾಗಿಡಬೇಕು ಎಂದು ಆಯೋಗ ಖಚಿತಪಡಿಸಬೇಕು.
- ಸಮೀಕ್ಷೆ ದತ್ತಾಂಶವನ್ನು ಯಾವುದೇ ವ್ಯಕ್ತಿ ಬಹಿರಂಗಪಡಿಸಬಾರದು.
- ಮಾಹಿತಿ ನೀಡುವುದು ಸ್ವಯಂಪ್ರೇರಿತವಾಗಿರಬೇಕು,ಯಾರಿಗೂ ಒತ್ತಡ ಹೇರುವಂತಿಲ್ಲ.
- ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.
ಇನ್ನು ನ್ಯಾಯಾಲಯದ ಈ ತೀರ್ಪಿನಿಂದ ಸಮೀಕ್ಷೆಯ ಮುಂದಿನ ಹಂತಕ್ಕೆ ಸರ್ಕಾರಕ್ಕೆ ಹಸಿರು ನಿಶಾನೆ ಸಿಕ್ಕಿದೆ.




