Hassan ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ನೆಡೆದಿದೆ.

Hassan : ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಸಂದರ್ಭದಲ್ಲೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ. ಘಟನೆ Arakalagudu ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತ ಶಿಕ್ಷಕರನ್ನು 53 ವರ್ಷದ ಸತೀಶ್ ಎಂದು ಗುರುತಿಸಲಾಗಿದೆ. ಅವರು Hassan ಜಿಲ್ಲೆಯ ಕೇರಳಾಪುರ ಗ್ರಾಮದವರು ಆಗಿದ್ದು, ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ತರಗತಿಯಲ್ಲೇ ಕುಸಿದು ಬಿದ್ದರು.
ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ವಿಫಲ
ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರು ತಕ್ಷಣ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
READ THIS : ಸ್ನೇಹಿತನಿಗೆ ಚಟ್ಟ ಕಟ್ಟಲು ಮುಂದಾದ್ನ? – ಮಚ್ಚಿನಿಂದ ಕೊಚ್ಚಿ ಕೊಚ್ಚಿ ಹಲ್ಲೆ

ಶಾಲೆಯಲ್ಲಿ ಶೋಕ ವಾತಾವರಣ
ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.
MUST WATCH : TUMAKURU|ಕುಡಿದ ಮತ್ತಲ್ಲಿ ಸ್ನೇಹಿತನ ಮೇಲೆ ಅಟ್ಯಾಕ್ – ಸ್ಥಳದಿಂದ ಪ್ರಜಾಶಕ್ತಿ ಟಿವಿ ಪ್ರತ್ಯಕ್ಷ




