ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ – ಬಜೆಟ್ ನಲ್ಲಿ CM ಘೋಷಣೆ.

ಶಾಲಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚುತ್ತಿರುವುದನ್ನು ತಡೆಯಲು ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸಲಾಗುತ್ತದೆ ಎಂದು CM ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಅಡ್ಡಪರಿಣಾಮ
ದೇಶದಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪ ಮಾಡಲಾಗಿದೆ.

ಮಕ್ಕಳಿಗೆ Social Media ಬ್ಯಾನ್
ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಸ್ಮಾರ್ಟ್ಫೋನ್ ಬಳಕೆ ಮಿತಿಮೀರುತ್ತಿದ್ದು, ಇದು ಅವರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೆ ತೀವ್ರ ಸ್ವರೂಪದ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡಿರುವ ಸರ್ಕಾರ, ಹದಿನಾರು ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸುವ ಮಹತ್ವದ ತೀರ್ಮಾನವನ್ನು ಬಜೆಟ್ನಲ್ಲಿ ಪ್ರಕಟಿಸಿದೆ.
ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ವಿವಿಧ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಏಕಾಗ್ರತೆ ನಾಶವಾಗುತ್ತಿದ್ದು, ಈ ಹೊಸ ನಿಯಮವು ಎಳೆಯರನ್ನು ಡಿಜಿಟಲ್ ವ್ಯಸನದಿಂದ ಮುಕ್ತಗೊಳಿಸಲು ಸಹಕಾರಿಯಾಗಲಿದೆ.

READ THIS : ಇರಾನ್-ಇಸ್ರೇಲ್ War Effect : ಭಾರತದಲ್ಲಿ ಈ ಎಲ್ಲಾ ವಸ್ತುಗಳ ಬೆಲೆ ದಿಢೀರ್ ಏರಿಕೆ!
ಸೋಶಿಯಲ್ ಮೀಡಿಯಾ ಬಳಕೆಗೂ ಬಿತ್ತು ಬ್ರೇಕ್?
ಇದಕ್ಕೂ ಮೊದಲು ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲಿಯೂ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂಬುದಾಗಿ ಉಲ್ಲೇಖಿಸಲಾಗಿತ್ತು.
ಡಿಜಿಟಲ್ ಸಾಧನಗಳ ಅತಿಯಾದ ಬಳಕೆ ಮಕ್ಕಳ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು ವರದಿ ಸೂಚಿಸಿತ್ತು.

ಪೋಷಕರಿಂದ ವ್ಯಾಪಕ ಬೆಂಬಲ
ಸರ್ಕಾರದ ಈ ನಿರ್ಧಾರಕ್ಕೆ ಪೋಷಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಆನ್ಲೈನ್ ಗೇಮ್ಗಳು ಮತ್ತು ಕಿರು ವಿಡಿಯೋಗಳ ಗೀಳಿನಿಂದ ಮಕ್ಕಳು ಓದಿನಿಂದ ವಂಚಿತರಾಗುತ್ತಿದ್ದರು. ಈಗ ಸರ್ಕಾರದ ಈ ಕ್ರಮವು ಪೋಷಕರಿಗೆ ದೊಡ್ಡ ಸಮಾಧಾನ ತಂದಿದೆ. ಶಿಕ್ಷಣ ತಜ್ಞರು ಮತ್ತು ಮನೋವೈದ್ಯರು ಕೂಡ ಸರ್ಕಾರದ ಈ ಧೈರ್ಯದ ನಡೆಯನ್ನು ಶ್ಲಾಘಿಸಿದ್ದು, ಇದು ಮಕ್ಕಳ ಸೃಜನಶೀಲತೆ ಹೆಚ್ಚಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
MUST WATCH : ವಿಷಕಾರಿ ಮೇವು ತಿಂದು ಕುರಿಗಳು ಸಾ* – ಕುರಿಗಳ ಸಾವಿಗೆ ರೈತ ಕುಟುಂಬ ಕಂಗಾಲು




