ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ Vijay – Trisha.

ದಳಪತಿ ವಿಜಯ್ ಹಾಗೂ ತ್ರಿಷಾ ನಡುವೆ ಸಂಬಂಧ ಇದೆ, ಈ ಕಾರಣದಿಂದ ವಿಜಯ್ ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ ಎಂಬ ಮಾತು ಜೋರಾಗಿದೆ. ವಿಜಯ್ ಪತ್ನಿ ಸಂಗೀತಾ ಅವರು ಖುದ್ದು, ‘ವಿಜಯ್ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ವಿಜಯ್ಮತ್ತು ತ್ರಿಶಾ ಇದೀಗ ಒಂದೇ ಬಣ್ಣದ ಉಡುಗೆಯಲ್ಲಿ ಆರತಕ್ಷತೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಒಂದೇ ಬಣ್ಣದ ಉಡುಗೆಯಲ್ಲಿ ಮಿಂಚಿಂಗ್
ನೆನ್ನೆ ಚೆನ್ನೈನಲ್ಲಿ ನಡೆದ ನಿರ್ಮಾಪಕ ಕಲ್ಪತಿ ಎಸ್ ಸುರೇಶ್ ಹಾಗೂ ಮೀನಾಕ್ಷಿ ಸುರೇಶ್ ಅವರ ಪುತ್ರನ ಮದುವೆ ಆರತಕ್ಷತೆಯಲ್ಲಿ ಇಬ್ಬರೂ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿಜಯ್ ಮತ್ತು ತ್ರಿಶಾ ಒಂದೇ ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು, ಅಲ್ಲಿದ್ದವರ ಗಮನ ಸೆಳೆದಿದೆ.

READ THIS : ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ರಣರೋಚಕ ಜಯ ಸಾಧಿಸಿದ ಭಾರತ!
ನಟಿ ತ್ರಿಶಾ ಜೊತೆ ವಿವಾಹೇತರ ಸಂಬಂಧ
ಇತ್ತೀಚೆಗೆ ವಿಜಯ್ ಅವರ ಪತ್ನಿ ಸಂಗೀತಾ ಅವರು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.
ಜೊತೆಗೆ ವಿಜಯ್ ಅವರು ನಟಿ ತ್ರಿಶಾ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ ಎಂಬ ಮಾತುಗಳೂ ಕೇಳಿಬಂದಿದ್ದವು.
ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ
ಈ ಸುದ್ದಿಗಳ ಬೆನ್ನಲ್ಲೇ ವಿಜಯ್ ಮತ್ತು ತ್ರಿಶಾ ಮೊದಲ ಬಾರಿಗೆ ಒಂದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇನ್ನು ಮದುವೆ ಆರತಕ್ಷತೆಯಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋಗಳು ಹಾಗೂ ವಿಡಿಯೋಗಳುವೈರಲ್ ಆಗುತ್ತಿವೆ.

ಈ ಆರೋಪಗಳು ಹೊಸದೇನಲ್ಲ
ಅಂದಹಾಗೆ, Vijay – Trisha ಬಗ್ಗೆ ಈ ಆರೋಪಗಳು ಹೊಸದೇನಲ್ಲ. ಕಳೆದ ಹಲವು ವರ್ಷಗಳಿಂದಲೂ ವಿಜಯ್ ಹಾಗೂ ತ್ರಿಷಾ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾರೆ ಎಂಬ ಗಾಸಿಪ್ಗಳು ಜೋರಾಗಿಯೇ ಹರಿದಾಡುತ್ತಿದ್ದವು. ಈಗ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡು ಈ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ. ಜೊತೆಗೆ, ತ್ರಿಷಾ ಕೃಷ್ಣನ್ ವಿಜಯ್ ಜೊತೆಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುತ್ತಿದ್ದಾಗಲೂ ಹಲವರು ಇವರಿಬ್ಬರು ರಿಲೇಶನ್ಶಿಪ್ನಲ್ಲಿದ್ದಾರೆ ಎಂದೆಲ್ಲಾ ಕಾಮೆಂಟ್ಗಳನ್ನ ಮಾಡುತ್ತಿದ್ದರು.

MUST WATCH : DEVANAHALLI | ಚಿನ್ನದ ಆಸೆ ತೋರಿಸಿ ಭಯಾನಕ ರಾಬರಿ..! ದುಡ್ಡಿಗಾಗಿ ಏನೆಲ್ಲಾ ಪ್ಲಾನ್ ಮಾಡಿದ್ರು ನೋಡಿ?




