Bengaluru : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿದೆ.

ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳ ಗೃಹಿಣಿರ್ಯೋವಳ ಸಾವಿನಲ್ಲಿ ಅಂತ್ಯವಾದ ಘಟನೆ Bengaluru ನಗರದಲ್ಲಿ ನಡೆದಿದೆ. ಮೂರು ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ.
ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಜಗಳ
ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಕಾವ್ಯ ಅವರು ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗುವಿದೆ ಎಂದು ತಿಳಿದುಬಂದಿದೆ. ಗುರುವಾರ ಮನೆಯಲ್ಲಿ ಊಟದ ವಿಚಾರವಾಗಿ ದಂಪತಿ ನಡುವೆ ಜೋರು ಜಗಳ ನಡೆದಿದೆ.
‘ಪ್ರತಿದಿನ ಹಳೇ ಸಾಂಬಾರನ್ನೇ ಹಾಕುತ್ತೀಯಾ?’
ವರದಿಗಳ ಪ್ರಕಾರ, ಕಾವ್ಯ ಅವರು ಮೂರು ದಿನಗಳ ಹಿಂದೆ ತಯಾರಿಸಿದ್ದ ಸಾಂಬಾರ್ ಅನ್ನು ಬಿಸಿ ಮಾಡಿ ಪತಿಗೆ ಬಡಿಸಿದ್ದರು. ಇದೇ ವಿಷಯಕ್ಕೆ ರಂಗಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಪ್ರತಿದಿನ ಹಳೇ ಸಾಂಬಾರನ್ನೇ ಹಾಕುತ್ತೀಯಾ?’ ಎಂದು ಪ್ರಶ್ನಿಸಿ ಪತ್ನಿಯ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ರಂಗಸ್ವಾಮಿ ಪತ್ನಿಯನ್ನು ಮನಬಂದಂತೆ ಬೈದಿದ್ದಲ್ಲದೆ, ಆಕೆಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
READ THIS : ತುಮಕೂರು – ಕುಣಿಗಲ್ ರಸ್ತೆಯಲ್ಲಿ Deadly Accident – ಇಬ್ಬರು ಸಾವು

ದುರಂತ ಅಂತ್ಯಕಂಡ ಪತ್ನಿ
ಪತಿಯ ನಿಂದನೆ ಹಾಗೂ ಹಲ್ಲೆಯ ಯತ್ನದಿಂದ ತೀವ್ರವಾಗಿ ಮನನೊಂದ ಕಾವ್ಯ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಕಾವ್ಯ ವಾಂತಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಕುಟುಂಬ ಸದಸ್ಯರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಮಾರ್ಗಮಧ್ಯದಲ್ಲೇ ಕಾವ್ಯ ಕೊನೆಯುಸಿರೆಳೆದಿದ್ದಾರೆ.
ಪೊಲೀಸ್ ತನಿಖೆ
ಸದ್ಯ ಕಾವ್ಯಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಂಗಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
MUST WATCH : ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದು- ಮಹತ್ವದ ಆದೇಶ ಏನು..?




