Hassan ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಓಂನಗರ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ..

Hassan ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಓಂನಗರ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ ಎಂಬುವರ ಕಾಫಿ ತೋಟದೊಳಗಿನ ಕೆರೆಯಲ್ಲಿ ನಾಲ್ವರು ಸ್ನೇಹಿತರು ಈಜಾಡಲು ತೆರಳಿದ್ದರು. ಆದರೆ ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿಕೊಂಡು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
MUST READ : ತುಮಕೂರು – ಕುಣಿಗಲ್ ರಸ್ತೆಯಲ್ಲಿ Deadly Accident – ಇಬ್ಬರು ಸಾವು

ದುರ್ಮರಣಕ್ಕೀಡಾದ ವಿದ್ಯಾರ್ಥಿಗಳನ್ನು:
- ಭರತ್ (18)
- ಮಿಥುನ್ (19)
ಎಂದು ಗುರುತಿಸಲಾಗಿದೆ. ಇಬ್ಬರೂ ಪಾಳ್ಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ನಾಲ್ವರು ಸ್ನೇಹಿತರು ಒಟ್ಟಿಗೆ ಕೆರೆಗೆ ಈಜಲು ಹೋಗಿದ್ದರು. ಆದರೆ ಈ ವೇಳೆ ಕೆಸರಿನಲ್ಲಿ ಸಿಲುಕಿಕೊಂಡ ಭರತ್ ಮತ್ತು ಮಿಥುನ್ ನೀರಲ್ಲಿ ಮುಳುಗಿ ಸಾವನ್ನಪ್ಪಿದರು.
ಇನ್ನಿಬ್ಬರು ಸ್ನೇಹಿತರು ಹೇಗೋ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ನಂತರ ಸ್ಥಳೀಯರು ತಕ್ಷಣ ಕೆರೆಗೆ ಇಳಿದು ಮೃತರ ಶವಗಳನ್ನು ಹೊರತೆಗೆದಿದ್ದಾರೆ.ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇಬ್ಬರು ಯುವಕರ ಅಕಾಲಿಕ ಸಾವಿನಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಭರತ್ ಮತ್ತು ಮಿಥುನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರ ಕಣ್ಣು ನೀರಾಯಿತು.




