ಮೈಸೂರಿನಲ್ಲಿ ಮಾತನಾಡಿದ CM ಸಿದ್ದರಾಮಯ್ಯ, ತಕ್ಷಣ ಸಿಎಂ ಸ್ಥಾನ ಬಿಡುತ್ತೇನೆ ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಚರ್ಚೆ ನಡುವೆ ಈ ಹೇಳಿಕೆ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ CM ಸಿದ್ದರಾಮಯ್ಯ ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಮೈಸೂರಿನಲ್ಲಿ ಮಾತನಾಡಿದ ಅವರು, “ಹೈಕಮಾಂಡ್ ಹೇಳಿದರೆ ತಕ್ಷಣವೇ ಸಿಎಂ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದೆ.

17ನೇ ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ನಾನು ಎಂದು ಹೇಳಿದರು.
ಇದೇ ವೇಳೆ ಹೈಕಮಾಂಡ್ ಅವಕಾಶ ನೀಡಿದರೆ ಮುಂದೆಯೂ ಬಜೆಟ್ ಮಂಡಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
MUST READ : ತುಮಕೂರು – ಕುಣಿಗಲ್ ರಸ್ತೆಯಲ್ಲಿ Deadly Accident – ಇಬ್ಬರು ಸಾವು

ಹೈಕಮಾಂಡ್ ನಿರ್ಧಾರವೇ ಅಂತಿಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವಂತೆ,
“ಹೈಕಮಾಂಡ್ ಹೇಳಿದರೆ ನಾನು ಮುಂದುವರೆಯುತ್ತೇನೆ, ಬಿಡಿ ಎಂದರೆ ತಕ್ಷಣ ಸ್ಥಾನ ಬಿಡುತ್ತೇನೆ. ಅವರ ನಿರ್ಧಾರಕ್ಕೆ ನಾನು ಬದ್ಧ.”
ಅವರು ಹೈಕಮಾಂಡ್ ಮೇಲಿನ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿ, ಪಕ್ಷದ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಜನರು ಅವಕಾಶ ಕೊಟ್ಟರೆ ಮುಂದುವರಿಯುತ್ತೇನೆ
ಸಿದ್ದರಾಮಯ್ಯ ಮುಂದುವರೆದು ಮಾತನಾಡುತ್ತಾ,
ಬಜೆಟ್ ಮಂಡನೆ ಮೂಲಕ ದಾಖಲೆ ಮಾಡುವುದು ಮುಖ್ಯವಲ್ಲ. ಜನರು ಅವಕಾಶ ನೀಡಿದರೆ ಮುಂದೆಯೂ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಅದೇ ವೇಳೆ ತಾವು ಯಾವಾಗಲೂ ವಾಸ್ತವಕ್ಕೆ ವಿರುದ್ಧವಾಗಿ ಮಾತನಾಡುವುದಿಲ್ಲ ಎಂದು ಕೂಡ ಹೇಳಿದ್ದಾರೆ.

ಬಜೆಟ್ ಬಗ್ಗೆ ಟೀಕೆಗೆ ಸ್ಪಷ್ಟನೆ
ರಾಜ್ಯ ಬಜೆಟ್ ಒಂದು ವರ್ಗಕ್ಕೆ ಸೀಮಿತವಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ,
ಈ ಬಜೆಟ್ ಸಾಮಾಜಿಕ ನ್ಯಾಯದ ಆಧಾರದಲ್ಲಿ ಮಂಡಿಸಿರುವ ಅಭಿವೃದ್ಧಿ ಬಜೆಟ್ ಎಂದು ಹೇಳಿದರು.
ಆದರೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಣ ಸಂಪೂರ್ಣವಾಗಿ ಸಿಗದಿರುವುದರಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಕೂಡ ಅವರು ಅಭಿಪ್ರಾಯಪಟ್ಟರು.




