ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ Airport ಸಿಬ್ಬಂದಿ ಮಹಿಳೆಯನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯನ್ನು ತವರಿಗೆ ಕಳುಹಿಸಿದ ಬಳಿಕ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ Airport ಸಿಬ್ಬಂದಿ ವ್ಯಕ್ತಿ, ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಆಕೆಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ.
ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಪತ್ನಿ ತವರಿಗೆ ಹೋಗಿದ್ದ ಸಂದರ್ಭದಲ್ಲಿ ಆರೋಪಿಯಾದ ಮೌನೇಶ್ ಎಂಬಾತ ಮತ್ತೊಬ್ಬ ಮಹಿಳೆ ನಿರ್ಮಲಾ ಜೊತೆ ಅಕ್ರಮ ಸಂಬಂಧ ಹೊಂದಿದ್ದನು.
ಇಬ್ಬರೂ ಕಳೆದ ಸುಮಾರು ಒಂದು ವರ್ಷದಿಂದ ದೇವನಹಳ್ಳಿಯ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
MUST READ : Hassan : ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ..!!

ಪತ್ನಿ ವಾಪಸ್ ಬರುತ್ತಿದ್ದಂತೆ ವಿವಾದ
ನಂತರ ಪತ್ನಿ ಮನೆಗೆ ವಾಪಸ್ ಬರುತ್ತಾಳೆ ಎಂಬ ಮಾಹಿತಿ ಸಿಕ್ಕ ಬಳಿಕ ಮೌನೇಶ್, ನಿರ್ಮಲಾಗೆ ಮನೆಯಿಂದ ತೆರಳುವಂತೆ ಹೇಳಿದ್ದಾನೆ.
ಆದರೆ ನಿರ್ಮಲಾ ಮನೆಯಿಂದ ಹೋಗಲು ನಿರಾಕರಿಸಿ, ಮದುವೆಯಾಗುವಂತೆ ಪಟ್ಟು ಹಿಡಿದಿದ್ದಾಳೆ.
ಈ ವಿಚಾರದಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಇದರಿಂದ ಕೋಪಗೊಂಡ ಮೌನೇಶ್, ಹಗ್ಗದಿಂದ ಕತ್ತು ಹಿಸುಕಿ ನಿರ್ಮಲಾಳನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವನ್ನು ಚರಂಡಿಗೆ ಎಸೆದು ಬೆಂಕಿ
ಕೊಲೆ ಮಾಡಿದ ಬಳಿಕ ಆರೋಪಿಯು ಎರಡು ದಿನಗಳ ನಂತರ ಶವವನ್ನು ಚರಂಡಿಗೆ ಎಸೆದು ಬೆಂಕಿ ಹಚ್ಚಿದ್ದಾನೆ.ನಂತರ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಹುಡುಕಾಟ ನಡೆಸಿದರು. ತನಿಖೆಯಲ್ಲಿ ಮೌನೇಶ್ ಯಾದಗಿರಿಯಲ್ಲಿ ಇರುವ ಮಾಹಿತಿ ಸಿಕ್ಕಿದ್ದು, ತಕ್ಷಣವೇ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ.
ಈ ಪ್ರಕರಣ ಈಗ ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
MUST WATCH : 73 ಗ್ರಾ.ಪಂಚಾಯ್ತಿಗಳಿಂದ ಅತಿದೊಡ್ಡ ಭ್ರಷ್ಟಾಚಾರ- ಹಣ ಹೊಡೆದವರಿಗೆ CEO ನೋಟಿಸ್ ಕೊಟ್ಟು ವಾರ್ನಿಂಗ್




