Ramanagara ದ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ramanagara ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಲಾರಿ ನಡುವೆ ನಡೆದ ಡಿಕ್ಕಿಯಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಬೆಂಗಳೂರು–ಕನಕಪುರ ಮುಖ್ಯ ರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.
ಹಿಂಬದಿಯಿಂದ ಲಾರಿಗೆ ಡಿಕ್ಕಿಯಾದ ಕಾರು
ಪೊಲೀಸ್ ಮಾಹಿತಿ ಪ್ರಕಾರ, ಬೆಳಗ್ಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ಸ್ನೇಹಿತರು ಪ್ರಯಾಣಿಸುತ್ತಿದ್ದ ವೇಳೆ, ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
MUST READ : Dina Bhavishya : ದಿನ ಭವಿಷ್ಯ 8 ಮಾರ್ಚ್ 2026..

ಮೃತರ ಗುರುತು
ಅಪಘಾತದಲ್ಲಿ ಮೃತಪಟ್ಟವರನ್ನು
- ಸೈಯದ್ ಪಾಷ (22)
- ಯೂನಿಫ್ ಬಾನ್ (23)
- ಅಜರ್ ಪಾಷ (22)
ಎಂದು ಗುರುತಿಸಲಾಗಿದೆ.ಇನ್ನೊಬ್ಬರಾದ ಫರಾಜ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕಗ್ಗಲೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದೀಗ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.
MUST WATCH : ನಿಮ್ಮ ಮನೆ ಸುರಕ್ಷಿತವಾಗಿ ಇರ್ಬೇಕಾ..?- ದೀರ್ಘಕಾಲಿಕ ಬಾಳಿಕೆಗೆ SUNVIK TMT , BARS & BRICKS ಬಳಸಿ




