Hassan ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ನೌಕರ ದೇವಾನಂದ್ (42) ಮಲಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Hassan ಜಿಲ್ಲೆಯ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಜಾನೆ ಮಲಗಿದ್ದ ವೇಳೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.
ಮೃತರನ್ನು ದೇವಾನಂದ್ (42) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
MUST READ : ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು – BESCOM ನಿರ್ಲಕ್ಷ್ಯ ಆರೋಪ

ಮಲಗಿದ್ದಲ್ಲೇ ಹೃದಯಾಘಾತ
ಮಾಹಿತಿ ಪ್ರಕಾರ, ಇಂದು ಮುಂಜಾನೆ ದೇವಾನಂದ್ ಮಲಗಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಪರಿಶೀಲನೆ ನಡೆಸಿದ ನಂತರ ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ನಾಟಕಗಳಲ್ಲಿ ಅಭಿನಯಿಸಿದ್ದ ದೇವಾನಂದ್
ದೇವಾನಂದ್ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುವುದರ ಜೊತೆಗೆ ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿ ಸ್ಥಳೀಯವಾಗಿ ಹೆಸರು ಮಾಡಿದ್ದರು. ಅವರ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮೃತ ದೇವಾನಂದ್ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
MUST WATCH : ಗಂಡ ಸತ್ತು ಹಸೆಮಣೆ ಏರಿದ್ದ ಪತ್ನಿಯ ಕಥೆ- ಐನಾತಿಯ ಸ್ಟೋರಿ ಕೇಳಿ ಪೊಲೀಸರೇ ಶಾಕ್




