Tiptur : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿ – ಕಚೇರಿ ಮುಂದೆ ಪ್ರತಿಭಟಿಸಿ ಆಕ್ರೋಶ .

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿಯಾಗಿದ್ದು, ಕ್ರಮಕ್ಕೆ ಒತ್ತಾಯಿಸಿ ಬೆಸ್ಕಾಂ ಕಚೇರಿ ಮುಂದೆ ಸಾರ್ವಜನಿಕರು ಪ್ರತಿಭಟಿಸಿ ಆಕ್ರೋಶ ಹೊರಹಾಕಿದ ಘಟನೆ Tiptur ನಲ್ಲಿ ನಡೆದಿದೆ.
ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು
ಹೌದು ತಿಪಟೂರು ತಾಲೂಕಿನ ತಾಲೂಕಿನ ಚೌಡ್ಲಾಪುರ ಗ್ರಾಮದ ಬಳಿ ಟಿಸಿ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಲೈನ್ಮ್ಯಾನ್ ಮೃತಪಟ್ಟಿದ್ದರು.. ಕಲ್ಲುಶೆಟ್ಟಿ ಹಳ್ಳಿ ಗ್ರಾಮದ 26 ವರ್ಷದ ಮನು ಎಂಬ ಲೈನ್ಮ್ಯಾನ್ ಸಾವನ್ನಪ್ಪಿದ್ದರು. ಮೃತದೇಹವನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
READ THIS : Women’s Day 2026|ಮಹಿಳಾ ದಿನದ ಮಹತ್ವವೇನು..?

ಅಧಿಕಾರಿಗಳ ನಿರ್ಲಕ್ಷ್ಯ ಆರೋಪ – Tiptur
ಇನ್ನು ಟಿಸಿ ಬದಲಾಯಿಸುವ ಸಂದರ್ಭದಲ್ಲಿ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರ್ ನೀಡದೆ ಕರ್ತವ್ಯಕ್ಕೆ ನಿಯೋಜಿಸಿದ್ರು. ಇದ್ರಿಂದನೇ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಬೆಸ್ಕಾಂ ಕಚೇರಿ ಮುಂದೆ ಜಮಾಯಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಇನ್ನು ಸಾವಿಗೆ ಕಾರಣರಾದವರನ್ನು ಕೂಡಲೇ ಕೆಲಸದಿಂದ ವಜಾ ಗೊಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ರು.
ಪ್ರತಿಭಟನಕಾರರರನ್ನು ಸಮಾಧಾನ ಪಡಿಸಿದ ಪೊಲೀಸ್
ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಮಧ್ಯಪ್ರವೇಶಿಸಿ, ಪ್ರತಿಭಟನಕಾರರರನ್ನು ಸಮಾಧಾನ ಪಡಿಸುವ ಕೆಲಸ ಮಾಡಿದ್ರು. ಇನ್ನು ಇದೇ ವೇಳೆ ಬೆಸ್ಕಾಂನ ಸೋಮಶೇಖರ್ ಶಿವಲಿಂಗಸ್ವಾಮಿ, Keb ಗುತ್ತಿಗೆದಾರರಾದ ಬಸವರಾಜು ಹೊಸಹಳ್ಳಿ, ಎ ಟಿ ಪ್ರಸಾದ್, ರೈತ ಸಂಘ ದ ಚನ್ನಬಸವಣ್ಣ ಸೇರಿ ಹಲವು ಮಂದಿ ಉಪಸ್ಥಿತರಿದ್ದರು.

MUST WATCH : ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಕಾಟ ಮದ್ಯವರ್ತಿಗಳ ಕಾಟಕ್ಕೆ ಶಾಸಕರ ಸೂಚನೆ

