T20 World Cup 2026 : ಭಾರತಕ್ಕೆ ಮೂರು ಬಾರಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ವಿಶ್ವದ ಮೊದಲ ಹೆಗ್ಗಳಿಕೆ!

T20 World Cup 2026 : ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನೆನ್ನೆ ನಡೆದ ಟಿ20 ವಿಶ್ವಕಪ್ 2026ರ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಈ ಅದ್ಭುತ ಗೆಲುವಿನೊಂದಿಗೆ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿದೆ.

ಟಿ20 ವಿಶ್ವಕಪ್ ಗೆದ್ದು ಇತಿಹಾಸವನ್ನೇ ಬುಡಮೇಲು ಮಾಡಿದ ಇಂಡಿಯಾ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ನೀಡಿದರು. ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 89 ರನ್ ಸಿಡಿಸಿದರೆ, ಅಭಿಷೇಕ್ ಶರ್ಮಾ ಕೇವಲ 21 ಎಸೆತಗಳಲ್ಲಿ 52 ರನ್ ಗಳಿಸಿ ಕಿವೀಸ್ ಬೌಲರ್ಗಳನ್ನು ಬೆಚ್ಚಿಬೀಳಿಸಿದರು. ನಂತರ ಕ್ರೀಸ್ಗೆ ಬಂದ ಇಶಾನ್ ಕಿಶನ್ ಕೂಡ ಕೇವಲ 25 ಎಸೆತಗಳಲ್ಲಿ 54 ರನ್ ಸಿಡಿಸಿ ರನ್ ಮಳೆ ಸುರಿಸಿದರು. ಇದರ ನೆರವಿನಿಂದ ಭಾರತ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ಗಳ ಭಾರೀ ಮೊತ್ತ ಕಲೆಹಾಕಿತು. ಇದು ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಯಾವುದೇ ತಂಡ ಗಳಿಸಿದ ಅತಿ ಗರಿಷ್ಠ ಮೊತ್ತವಾಗಿದೆ.

READ THIS : `WhatsApp’ ಬಳಕೆದಾರರೇ ಎಚ್ಚರ – ಈ ಮೆಸೇಜ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !
ಕಿವೀಸ್ಗೆ ದೊಡ್ಡ ಆಘಾತ
ಇನ್ನು 256 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ನಾಯಕ ಸೂರ್ಯಕುಮಾರ್ ಅವರ ಯೋಜನೆಯಂತೆ ಬೇಗನೆ ದಾಳಿಗಿಳಿದ ಅಕ್ಷರ್ ಪಟೇಲ್ 3 ವಿಕೆಟ್ ಪಡೆದು ಕಿವೀಸ್ ತಂಡಕ್ಕೆ ದೊಡ್ಡ ಆಘಾತ ನೀಡಿದರು. ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಕೇವಲ 15 ರನ್ ನೀಡಿ 4 ವಿಕೆಟ್ ಕಬಳಿಸಿ ನ್ಯೂಜಿಲೆಂಡ್ ಬ್ಯಾಟಿಂಗ್ ಸಾಲನ್ನು ಕುಸಿತಕ್ಕೆ ತಳ್ಳಿದರು.

159 ರನ್ಗಳಿಗೆ ಆಲೌಟ್
ಟಿಮ್ ಸೈಫರ್ಟ್ ಅರ್ದಶತಕದೊಂದಿಗೆ ಹೋರಾಟ ನೀಡಿದರೂ, ಉಳಿದ ಬ್ಯಾಟ್ಸ್ಮನ್ಗಳು ವಿಫಲರಾದ ಕಾರಣ ನ್ಯೂಜಿಲೆಂಡ್ ತಂಡ 159 ರನ್ಗಳಿಗೆ ಆಲೌಟ್ ಆಯಿತು.
ಇದರೊಂದಿಗೆ ಭಾರತ 96 ರನ್ಗಳ ಭರ್ಜರಿ ಗೆಲುವು ಸಾಧಿಸಿ ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿತು.

ತವರಿನಲ್ಲಿ ದೊಡ್ಡ ಸಾಧನೆ
ಇನ್ನು ಪಂದ್ಯದ ನಂತರ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಹೊಗಳಿದರು. “ಈ ಗೆಲುವನ್ನು ಅರಗಿಸಿಕೊಳ್ಳಲು ಸ್ವಲ್ಪ ಸಮಯ ಬೇಕು.
2024ರ ವಿಶ್ವಕಪ್ ನಂತರ ಬಿಸಿಸಿಐ, ಜಯ್ ಶಾ ಹಾಗೂ ರೋಹಿತ್ ಶರ್ಮಾ ನನ್ನ ಮೇಲೆ ನಂಬಿಕೆ ಇಟ್ಟು ತಂಡದ ನಾಯಕತ್ವ ನೀಡಿದರು.
ತವರಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ ಅನುಭವ,” ಎಂದು ಸಂತಸ ವ್ಯಕ್ತಪಡಿಸಿದರು.

MUST WATCH : ST SRINIVAS | ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕೈ ಪ್ರಾಬಲ್ಯ ಗೌರಿಶಂಕರ್ ನೇತೃತ್ವದಲ್ಲೇ ಮುಂದಿನ ಚುನಾವಣೆ




