ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮನಕಲಕುವ ಘಟನೆ – ನೇಣು ಬಿಗಿದು ದಂಪತಿ Suicide.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯಲ್ಲಿ ದಂಪತಿಯೊಬ್ಬರು ನೇಣು ಬಿಗಿದುಕೊಂಡು Suicide ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನುದಿವ್ಯ (25) ಮತ್ತು ದರ್ಶನ್ (29) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದ ಈ ದಂಪತಿಗೆ ಎರಡು ವರ್ಷದ ಮಗು ಇದ್ದು, ಈಗ ಮಗು ಅನಾಥವಾಗಿದೆ.

ಘಟನೆಯ ವಿವರ
ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಮೆಡಿಕಲ್ ಶಾಪ್ ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಉಂಟಾಗಿತ್ತು. ಗಂಡನೊಂದಿಗೆ ಜಗಳವಾದ ಬಳಿಕ ಮೊದಲು ದಿವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪತ್ನಿಯ ಸಾವಿನ ಬಗ್ಗೆ ಕುಟುಂಬ ಸದಸ್ಯರಿಗೆ ವಿಡಿಯೊ ಕಾಲ್ ಮೂಲಕ ಮಾಹಿತಿ ನೀಡಿದ ದರ್ಶನ್, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ದುರಂತದಿಂದ ದಂಪತಿಯ ಎರಡು ವರ್ಷದ ಮಗು ಈಗ ಅನಾಥವಾಗಿದ್ದು, ಕುಟುಂಬದವರು ಮಗುವನ್ನು ನೋಡಿಕೊಳ್ಳುತ್ತಿದ್ದಾರೆ.
READ THIS : ಟಿ20 ವಿಶ್ವಕಪ್ 2026 ಭಾರತದ ಮುಡಿಗೆ – ವಿಶ್ವಕಪ್ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

Suicide – ಪೊಲೀಸ್ ತನಿಖೆ ಆರಂಭ
ಇನ್ನು ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮಂಡ್ಯದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣದ ನಿಖರ ಕಾರಣ ಮತ್ತು ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪ್ರಕರಣವನ್ನು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಸ್ಥಳೀಯರಲ್ಲಿ ಆತಂಕ
ಕ್ಷುಲ್ಲಕ ಕಾರಣಕ್ಕೆ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವುದು ಸ್ಥಳೀಯರಲ್ಲಿ ಆಘಾತ ಮತ್ತು ಆತಂಕಕ್ಕೆ ಕಾರಣವಾಗಿದೆ.

MUST WATCH : BESCOM ನಿರ್ಲಕ್ಷ್ಯಕ್ಕೆ LINE MAN ಬ* ಕಚೇರಿ ಮುಂದೆ ಪ್ರತಿಭಟಿಸಿ ಆಕ್ರೋಶ




