
BENGALURU FIRE : ಬೆಂಗಳೂರು ನಗರದ ಮಲ್ಲೇಶ್ವರಂನ ಪೈಪ್ ಲೈನ್ ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ನೆನ್ನೆ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ರಾತ್ರಿ ಸುಮಾರು 2:30ರ ಸುಮಾರಿಗೆಬೆಂಕಿ ಹೊತ್ತಿಕೊಳ್ಳಲಾಗಿದ್ದು, ಅಂಗಡಿಯಲ್ಲಿ ಇಡಲಾಗಿದ್ದ ಫರ್ನಿಚರ್ ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಂದಾಜು ₹5 ಕೋಟಿ ಮೌಲ್ಯದ ನಷ್ಟಸಂಭವಿಸಿದೆ. ಅಗ್ನಿಯ ಹೊಗೆ ಮತ್ತು ಉರಿಯಿಂದ, ಅಂಗಡಿಗೆ ಸಮೀಪವಿರುವ ಅಪಾರ್ಟ್ಮೆಂಟ್ಗಳ ಮೂರು ಮನೆಗಳಿಗೂ ಬೆಂಕಿ ವ್ಯಾಪಿಸಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಸಚಿವ ದಿನೇಶ್ ಗುಂಡೂರಾವ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಸೂಕ್ತ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.




