ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಪೊಲೀಸರ ವಿಚಾರಣೆಗೆ ಹೆದರಿ ರೈತ ನಿಂಗಪ್ಪ ಅಂಗಡಿ (48) ಹೊಲದಲ್ಲೇ ನೇಣು ಬಿಗಿದು Suicide..!!ಮಾಡಿಕೊಂಡ ಘಟನೆ ನಡೆದಿದೆ…

ಧಾರವಾಡ ಜಿಲ್ಲೆಯಲ್ಲಿ ಆತಂಕಕಾರಿ ಘಟನೆ ನಡೆದಿದೆ. ಪ್ರಕರಣದಲ್ಲಿ ಪೊಲೀಸರ ವಿಚಾರಣೆಗೆ ಹೆದರಿದ ರೈತ ತನ್ನ ಹೊಲದಲ್ಲೇ ನೇಣು ಬಿಗಿದು Suicide ಮಾಡಿಕೊಂಡಿದ್ದಾನೆ.
ಈ ದುರ್ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತ ರೈತನನ್ನು ನಿಂಗಪ್ಪ ಕೋಟೆಪ್ಪ ಅಂಗಡಿ (48) ಎಂದು ಗುರುತಿಸಲಾಗಿದೆ.

ಪ್ರಕರಣದ ಹಿನ್ನೆಲೆ
ಮಾಹಿತಿ ಪ್ರಕಾರ, ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ನಿಂಗಪ್ಪ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅದನ್ನು ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಘಶ ಚನ್ನಣ್ಣವರ ಅವರು ನಿಂಗಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದರು.

ಪೊಲೀಸರ ವಿಚಾರಣೆಗೆ ಗಾಬರಿ
ಪೊಲೀಸರ ವಿಚಾರಣೆ ಎದುರಿಸಬೇಕಾದ ಪರಿಸ್ಥಿತಿಯಿಂದ ನಿಂಗಪ್ಪ ಗಾಬರಿಗೊಂಡು ಹಾಗೂ ಮನನೊಂದು ಈ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ನಂತರ ಅವರು ತಮ್ಮ ಹೊಲದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಕುರಿತು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.




