Kodagu ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ದುರ್ಘಟನೆ ನಡೆದಿದೆ…

Kodagu ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಡಾನೆ ದಾಳಿ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ದಾಳಿಯಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಜಲಜಾಕ್ಷಿ ಎಂದು ಗುರುತಿಸಲಾಗಿದೆ. ಅವರು ನಂಜರಾಯಪಟ್ಟಣ ಗ್ರಾಮ ಪಂಚಾಯತಿಯ ಮಾಜಿ ಸದಸ್ಯೆಯೂ ಆಗಿದ್ದು, ಸ್ಥಳೀಯವಾಗಿ ಪರಿಚಿತರಾಗಿದ್ದರು.
ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ, ಜಲಜಾಕ್ಷಿ ತಮ್ಮ ಕುಲಕಸುಬಿನ ಭಾಗವಾಗಿ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಮನೆಯ ಸಮೀಪದ ಕಾಡಿಗೆ ತೆರಳಿದ್ದರು. ಈ ವೇಳೆ ಅವರು ಸೀಗೆ ಹೆರಕುತ್ತಿದ್ದಾಗ, ಏಕಾಏಕಿ ಧಾವಿಸಿದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
MUST READ : ಬೆಂಗಳೂರಿನ ಹೆಬ್ಬಾಳದಲ್ಲಿ ವ್ಯಕ್ತಿ ರೈಲಿಗೆ ತಲೆಕೊಟ್ಟು Suicide..!!

ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ
ಘಟನೆಯ ಮಾಹಿತಿ ತಿಳಿದ ತಕ್ಷಣ ಕುಶಾಲನಗರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಬಳಿಕ ಮೃತದೇಹವನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಯಿತು.
ಇದೀಗ ಈ ಘಟನೆಗೆ ಸಂಬಂಧಿಸಿ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮಸ್ಥರ ಪ್ರಕಾರ, ಈ ಭಾಗದಲ್ಲಿ ದಿನನಿತ್ಯ ಕಾಡಾನೆಗಳ ಉಪಟಳ ಹೆಚ್ಚಾಗಿದೆ.
ಇದರ ಪರಿಣಾಮವಾಗಿ ಜನರು ಮನೆ ಹೊರಗೆ ಬರಲು ಸಹ ಹೆದರಿಕೆಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಪ್ರಾಣಭಯದಲ್ಲಿ ಗ್ರಾಮಸ್ಥರು
ಗ್ರಾಮಸ್ಥರು ಹೇಳುವಂತೆ, ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಕಾಡಿನೊಳಗೆ ಓಡಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ.
ಆದ್ದರಿಂದ, ಪ್ರತಿದಿನವೂ ಜನರು ಪ್ರಾಣಭಯದಲ್ಲೇ ಸಂಚಾರ ಮಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಘಟನೆಯ ನಂತರ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಸರ್ಕಾರ ತಕ್ಷಣ ಕ್ರಮ ಕೈಗೊಂಡು ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
MUST WATCH : ನಿಮ್ಮ ಮನೆ ಸುರಕ್ಷಿತವಾಗಿ ಇರ್ಬೇಕಾ..?- ದೀರ್ಘಕಾಲಿಕ ಬಾಳಿಕೆಗೆ SUNVIK TMT , BARS & BRICKS ಬಳಸಿ




