ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ Chikkaballapura ದಲ್ಲಿ ನಡೆದಿದೆ.

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ Chikkaballapura ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ.
ಕಾಲು ಜಾರಿ ಬಿದ್ದು ಸಾವು
ಮೃತ ಯುವತಿಯನ್ನು ಮೊನಿಷಾ (25) ಎಂದು ಗುರುತಿಸಲಾಗಿದೆ. ಅವರು ಗ್ರಾಮದ ಮಂಜಳಾ–ಮುನಿರಾಜು ದಂಪತಿಯ ಪುತ್ರಿಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.
READ THIS : Nelamangala|ಜಾಲಿ ರೈಡ್ಗೆ ಹೋಯ್ತು ಇಬ್ಬರು ಯುವಕರ ಜೀವ!

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ
ಮೃತ ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಕರಣ ದಾಖಲು – Chikkaballapura
ಇನ್ನು ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

MUST WATCH : ಲಂಚ ಪಡೆಯುವಾಗ್ಲೆ LOKA RAID -ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಹಗಲು ದರೋಡೆಗೆ ಇಳಿದ್ರಾ ವೈದ್ಯರು?




