
RAICHUR KSRTC BUS ACCIDENT : ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ KSRTC SLEEPER COACH ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿಬಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳ ಪೈಕಿ ಒರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೂ ತಕ್ಷಣ ಚಿಕಿತ್ಸೆ ಒದಗಿಸಲಾಗಿದ್ದು, ಎಲ್ಲರನ್ನೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಬಸ್ ದಾವಣಗೆರೆಯಿಂದ ರಾಯಚೂರಿಗೆಬರುತ್ತಿದ್ದ ವೇಳೆ ಚಾಲಕನ ನಿದ್ದೆ ಮಂಪರು ಈ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಇನ್ನು ಈ ಅಪಘಾತ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.




