
ಚಿಕ್ಕನಾಯಕನಹಳ್ಳಿ ತಾಲೂಕಿ ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪುನಃ ಅಹೋರಾತ್ರಿ ಧರಣಿ ಆರಂಭವಾಗಲಿದೆ. ಈ ಕುರಿತು ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಕಳೆದ ಸೆಪ್ಟೆಂಬರ್ 15ರಂದು ನಡೆದ ಧರಣಿಯ ವೇಳೆ, ರೈತರ ವಾರದ ಸಂತೆಗೆ ಅಗತ್ಯ ಸೌಲಭ್ಯಗಳಾದ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮಾಡುವ ಭರವಸೆಯನ್ನು ಪಂಚಾಯಿತಿ ಅಧಿಕಾರಿಗಳು ನೀಡಿದ್ದರು. ಇದೇ ವೇಳೆ ಪಿಎಸ್ಐ ಧರ್ಮಾಂಜಿ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯಲ್ಲಿ, ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಕಾವ್ಯ ರಾಣಿ ಹಾಗೂ ಮುಖ್ಯಾಧಿಕಾರಿ ಮಂಜುನಾಥ್ ಅವರು 15 ದಿನಗಳಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಆದರೆ 15 ದಿನ ಕಳೆದರು ಇನ್ನು ಭರವಸೆ ಈಡೇರಿಲ್ಲ. ಇದೇ ಕಾರಣಕ್ಕೆ ಕಾರಣ ರೈತರು ಮತ್ತೆ ಸೋಮವಾರದಿಂದ ಧರಣಿ ಆರಂಭಿಸಲು ನಿರ್ಧರಿಸಿದ್ದಾರೆ. ಕೂಡಲೇ ರೈತರ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದರು.
ಈ ಬಾರಿ ಯಾವುದೇ ಹಬ್ಬ ಅಥವಾ ಆಶ್ವಾಸನೆಗಳಿಗೆ ಜಗ್ಗುವುದಿಲ್ಲ. ಬೇಡಿಕೆಗಳು ಸಂಪೂರ್ಣ ಈಡೇರುವವರೆಗೂ ಧರಣಿಯನ್ನು ಹಿಂಪಡೆಯುವುದಿಲ್ಲ,” ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವ ರೈತರು ತಮ್ಮ ಜಾನುವಾರುಗಳಾದ ಮೇಕೆ, ಹಸುಗಳನ್ನು ಕೂಡ ಕರೆತರಬೇಕು. ಜೊತೆಗೆ ರಾತ್ರಿ ತಂಗಲು ಬೇಕಾದ ದಿಂಬು, ಹೊದಿಕೆ ಹಾಗೂ ಪಾತ್ರೆಗಳನ್ನು ಸಹ ತರಬೇಕೆಂದು ರಾಜ್ಯಾಧ್ಯಕ್ಷ ಚಂದ್ರಣ್ಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ, ತಾಲ್ಲೂಕು ಅಧ್ಯಕ್ಷ ಕರಿಯಪ್ಪ, ಹೋಬಳಿ ಅಧ್ಯಕ್ಷ ಕೆಂಕೆರೆ ಬಸವರಾಜು, ತುಮಕೂರು ಜಿಲ್ಲಾ ಕಾರ್ಯದರ್ಶಿ ಕಲ್ಲಹಳ್ಳಿ ಮಲ್ಲೇಶಯ್ಯ, ಪ್ರಶಾಂತ್, ಜಗದೀಶ್, ರೈತ ಮುಖಂಡರು ಹಾಜರಿದ್ರು




