Davanagere ಮೂಲದ ಪ್ರೇಮಿಗಳು ಹೊನ್ನಾಳಿಯ ತುಂಗಾಭದ್ರ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ…

Davanagere ಮೂಲದ ಪ್ರೇಮಿಗಳು ತುಂಗಾಭದ್ರ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ತುಂಗಾಭದ್ರ ಸೇತುವೆಯಿಂದ ನದಿಗೆ ಜಿಗಿದ ಪ್ರೇಮಿಗಳು
ಮಾಹಿತಿಯ ಪ್ರಕಾರ, ಪ್ರೇಮಿಗಳು ಹೊನ್ನಾಳಿಯ ತುಂಗಾಭದ್ರ ಬ್ರಿಡ್ಜ್ ಮೇಲಿಂದ ನದಿಗೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
MUST READ : Bangalore ನಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ತೇಜಸ್ವಿ ಸೂರ್ಯ ಮಧ್ಯ ಪ್ರವೇಶ..!
ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
ಸೂಚನೆ ಪಡೆದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರೇಮಿಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೀವಕ್ಕೆ ಅಪಾಯ ತಪ್ಪಿದ ಕಾರಣ
ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಈ ಘಟನೆದಲ್ಲಿ ಪ್ರೇಮಿಗಳ ಜೀವಕ್ಕೆ ಯಾವುದೇ ಗಂಭೀರ ಅಪಾಯ ಉಂಟಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯವರು ಅವರ ಮದುವೆಗೆ ಒಪ್ಪಿಗೆ ನೀಡದ ಹಿನ್ನೆಲೆ ಇಬ್ಬರೂ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇನ್ನು, ಕಳೆದ ಕೆಲವು ದಿನಗಳ ಹಿಂದೆಯೇ ಇಬ್ಬರೂ ಮನೆ ಬಿಟ್ಟು ಹೊರಟಿದ್ದರು ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಈ ಘಟನೆ ಬಳಿಕ ಹೊನ್ನಾಳಿ ಪ್ರದೇಶದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
MUST WATCH : ನಿಮ್ಮ ಮನೆ ಸುರಕ್ಷಿತವಾಗಿ ಇರ್ಬೇಕಾ..?- ದೀರ್ಘಕಾಲಿಕ ಬಾಳಿಕೆಗೆ SUNVIK TMT , BARS & BRICKS ಬಳಸಿ




