Chamarajanagar ದ ರೈಲ್ವೇ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ…

Chamarajanagar ದಲ್ಲಿ ಸಂಭವಿಸಿದ ಅಗ್ನಿ ಅವಘಡ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಗರದ ರೈಲ್ವೇ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದಂಪತಿಗೆ ಗಂಭೀರ ಗಾಯಗಳಾಗಿವೆ.
ಈ ಘಟನೆ ಚಾಮರಾಜನಗರ ನಗರದ ರೈಲ್ವೇ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ.ಅಡುಗೆ ಅನಿಲ ಸೋರಿಕೆಯಾದ ಕಾರಣ ಮನೆ ತುಂಬಾ ಬೆಂಕಿ ವ್ಯಾಪಿಸಿಕೊಂಡಿದೆ.
ಅವಘಡದಲ್ಲಿ ಗಾಯಗೊಂಡವರನ್ನು ಸಿ. ಪರಮೇಶ್ ಮತ್ತು ಮಂಜುಳಾ ಎಂದು ಗುರುತಿಸಲಾಗಿದೆ.
ಬೆಂಕಿ ತಗುಲಿದ ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
MUST READ : Bangalore ನಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ತೇಜಸ್ವಿ ಸೂರ್ಯ ಮಧ್ಯ ಪ್ರವೇಶ..!

ಮನೆ ವಸ್ತುಗಳು ಸುಟ್ಟು ಭಸ್ಮ
ಅಗ್ನಿ ಅವಘಡದಿಂದಾಗಿ ಮನೆಯಲ್ಲಿದ್ದ ಹಲವಾರು ವಸ್ತುಗಳು ಸುಟ್ಟು ಹೋಗಿವೆ. ಸುಟ್ಟು ಹಾನಿಯಾದ ವಸ್ತುಗಳು , ಪಾತ್ರೆಗಳು ಪಗಡ (ಗೃಹೋಪಯೋಗಿ ವಸ್ತುಗಳು) ಸ್ಟವ್ ದವಸಧಾನ್ಯ ಪರಿಣಾಮವಾಗಿ ಮನೆಯ ಒಳಗಿನ ಹೆಚ್ಚಿನ ಸಾಮಾನುಗಳು ಬೆಂಕಿಗೆ ಆಹುತಿಯಾಗಿವೆ.

ಅನಿಲ ಸೋರಿಕೆ ಕಾರಣ
ಪ್ರಾಥಮಿಕ ಮಾಹಿತಿಯ ಪ್ರಕಾರ ಅಡುಗೆ ಅನಿಲ ಸೋರಿಕೆಯೇ ಈ ಅಗ್ನಿ ಅವಘಡಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
MUST WATCH : ನಿಮ್ಮ ಮನೆ ಸುರಕ್ಷಿತವಾಗಿ ಇರ್ಬೇಕಾ..?- ದೀರ್ಘಕಾಲಿಕ ಬಾಳಿಕೆಗೆ SUNVIK TMT , BARS & BRICKS ಬಳಸಿ




