Vijayapura : ಶಾರ್ಟ್ ಸರ್ಕ್ಯೂಟ್ನಿಂದ ಹೋಟೆಲ್ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು.

ಶಾರ್ಟ್ ಸರ್ಕ್ಯೂಟ್ನಿಂದ ಹೋಟೆಲ್ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾತಾಂರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ Vijayapura ಜಿಲ್ಲೆಯ ಇಂಡಿ ಪಟ್ಟಣದ ಹೋಟೆಲ್ ಒಂದರಲ್ಲಿ ನಡೆದಿದೆ.

READ THIS : Tumakuru|ಹಾಡಹಗಲೇ ಹರಿಯಿತು ನೆತ್ತರು! ಬರ್ಬರವಾಗಿ ಕೊಂದು ಎಸ್ಕೇಪ್
ಅಪಾರ ಪ್ರಮಾಣದ ವಸ್ತುಗಳು ಹಾನಿ!
ಇನ್ನು ಹೋಟೆಲ್ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ.
ಇನ್ನು ಈ ಘಟನೆ ನಗರದ ಸೋಲಾಪುರ ರಸ್ತೆಯಲ್ಲಿ ಬಿಎಲ್ಇಡಿ ವಿಶ್ವ ವಿದ್ಯಾಲಯದ ಸಮೀಪದಲ್ಲಿರುವ ಕೃಷ್ಣ ಹೋಟೆಲ್ ನಲ್ಲಿ ನೆನ್ನೆ ನಸುಕಿ ಜಾನ ಸಂಭವಿಸಿದ್ದು, ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇನ್ನು ಈ ಅವಘಡದಿಂದ ಹೋಟೆಲ್ನಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದ್ದು ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡಿವೆ.

ಇಬ್ಬರಿಗೆ ಗಂಭೀರ ಗಾಯ – Vijayapura
ಇನ್ನು ಈ ಬೆಂಕಿ ಅವಘಡದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಇಡೀ ಕಟ್ಟಡ ನೆಲಸಮವಾಗಿದೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
MUST WATCH : ನಡುರಸ್ತೆಯಲ್ಲೇ ಮಹಿಳೆಯರು, ವಿದ್ಯಾರ್ಥಿಗಳನ್ನ ಇಳಿಸಿದ ಬಸ್ ಸಿಬ್ಬಂದಿ




