LPG ಗ್ಯಾಸ್ ಅಭಾವದಿಂದಾಗಿ ಜನರು ಹೈರಾಣಾಗಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯ ಪರಿಣಾಮ ಇದೀಗ ಭಾರತದಲ್ಲಿಯೂ ಕಾಣಿಸಿಕೊಳ್ಳಲು ಆರಂಭವಾಗಿದೆ. ಅಮೇರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಜಾಗತಿಕ ಇಂಧನ ಸರಬರಾಜು ವ್ಯವಸ್ಥೆಗೆ ಹೊಡೆತ ನೀಡಿದ್ದು, ಅದರ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಮರ್ಷಿಯಲ್ LPG ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದೆ.
ಈ ಪರಿಸ್ಥಿತಿ ರಾಜ್ಯದ ಹೋಟೆಲ್ ಉದ್ಯಮಕ್ಕೆ ದೊಡ್ಡ ಸಂಕಷ್ಟವನ್ನುಂಟು ಮಾಡಿದ್ದು, ಸಿಲಿಂಡರ್ ಪೂರೈಕೆ ಮುಂದುವರಿಯದಿದ್ದರೆ ಹೋಟೆಲ್ಗಳನ್ನು ಬಂದ್ ಮಾಡುವ ಪರಿಸ್ಥಿತಿ ಎದುರಾಗಬಹುದು ಎನ್ನಲಾಗಿದೆ.
ಕಲ್ಯಾಣ ಮಂಟಪಗಳಿಗೂ ಗ್ಯಾಸ್ ಸಮಸ್ಯೆ
ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಪರಿಣಾಮ ಈಗ ಕಲ್ಯಾಣ ಮಂಟಪಗಳಿಗೂ ಗ್ಯಾಸ್ ಸಮಸ್ಯೆ ಎದುರಾಗಿದೆ. ಮದುವೆ ಹಾಗೂ ಶುಭ ಕಾರ್ಯಕ್ರಮಗಳಿಗಾಗಿ ಬುಕ್ಕಿಂಗ್ ಮಾಡಿದವರಿಗೆ ಸಿಲಿಂಡರ್ಗಳನ್ನು ತಾವೇ ತರಲು ಕಲ್ಯಾಣ ಮಂಟಪಗಳು ಸೂಚಿಸುತ್ತಿರುವುದು ಗಮನ ಸೆಳೆಯುತ್ತಿದೆ.

ಪಿಜಿಗಳಿಗೂ ತಟ್ಟಿದ LPG ಸಿಲಿಂಡರ್ ಕೊರತೆ!
ಇನ್ನು ಎಲ್ಪಿಜಿ ಸಿಲಿಂಡರ್ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್ಗಳಲ್ಲಿ (ಪಿಜಿ) ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ
ಎಲ್ಪಿಜಿ ಸಿಲಿಂಡರ್ ತೀವ್ರ ಕೊರತೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ಮಕ್ಕಳಿಗೆ ಆಹಾರ ತಯಾರಿಸಲು ತಿಂಗಳಿಗೆ ಹಲವು ಸಿಲಿಂಡರ್ಗಳು ಬೇಕಾಗುತ್ತವೆ. ಆದರೆ, ಕೊರತೆಯಿಂದ ಕಡಿಮೆ ಸಂಖ್ಯೆಯಲ್ಲಿ ಸಿಲಿಂಡರ್ ಪೂರೈಕೆಯಾಗಿರೋದು, ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ.
READ THIS : ಜೈಲಿನ ಕಠಿಣ ನಿಯಮಗಳಿಂದ ಫುಲ್ ಕಂಗಾಲಾಗ್ತಿರೋ D GANG!

ಸಿಲಿಂಡರ್ ದರವನ್ನು ಹೆಚ್ಚಿಸುವುದು ಅನಿವಾರ್ಯ
ಇನ್ನು ಇರಾನ್ ಹಾಗೂ ಇಸ್ರೇಲ್ ನಡುವೆ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಅನಿಲದ ಬೆಲೆಗಳಲ್ಲಿ ತೀವ್ರ ಏರುಪೇರಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಈ ಬೆಲೆ ಏರಿಕೆಯನ್ನು ಸರಿದೂಗಿಸಲು ಭಾರತದಲ್ಲೂ ಸಿಲಿಂಡರ್ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಇತ್ತ ವಾಣಿಜ್ಯ ಸಿಲಿಂಡರ್ ದರ ಏರಿಕೆಯಿಂದಾಗಿ ಹೋಟೆಲ್ಗಳಲ್ಲಿ ತಿಂಡಿ, ಕಾಫಿ, ಟೀ ರೇಟ್ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ.
ಸಿಲಿಂಡರ್ ಬೆಲೆ 115 ರೂಪಾಯಿ ಏರಿಕೆ
ಇನ್ನು ಭೀಕರ ಯುದ್ಧದ ಎಫೆಕ್ಟ್ನಿಂದಾಗಿ ಭಾರತದಲ್ಲಿ ಹಲವು ಅಗತ್ಯ ವಸ್ತುಗಳ ಬೆಲೆಯೂ ಕೂಡ ಹೆಚ್ಚಳವಾಗಲಿದ್ದು, ಜನರು ಬೆಲೆ ಏರಿಕೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ ವಾರ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆ 60 ರೂಪಾಯಿ, ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 115 ರೂಪಾಯಿ ಏರಿಕೆಯಾಗಿದೆ.

MUST WATCH : ಮಗಳೊಂದಿಗೆ ನೇಣಿಗೆ ಕೊರಳೊಡ್ಡಿದ ತಾಯಿ- ಇಬ್ಬರ ಸಾ*ನ ಸುತ್ತ ಅನುಮಾನ..?!




