Ramanagara ದಲ್ಲಿ 5 ತಿಂಗಳ ಗರ್ಭಿಣಿ ನಯನಾ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ..!!

ಬೆಂಗಳೂರು ದಕ್ಷಿಣ ಜಿಲ್ಲೆಯ Ramanagara ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಐದು ತಿಂಗಳ ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುಃಖಕರ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಮೃತಳನ್ನು ನಯನಾ (19) ಎಂದು ಗುರುತಿಸಲಾಗಿದೆ. ಅವರು ಮನೆಯ ರೂಮಿನಲ್ಲಿಯೇ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
READ THIS : ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ Suicide – ಆಗಿದ್ದೇನು?

ನಯನಾ ಅವರ ಮರಣದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರು ಹಾಗೂ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮಾಹಿತಿಯ ಪ್ರಕಾರ, ನಯನಾ ಅವರು ಸುಮಾರು 9 ತಿಂಗಳ ಹಿಂದೆ ಸುನೀಲ್ ಅವರೊಂದಿಗೆ ವಿವಾಹವಾಗಿದ್ದರು. ವಿವಾಹದ ನಂತರ ಕೌಟುಂಬಿಕ ಕಲಹಗಳು ಹೆಚ್ಚಾಗಿದ್ದವು ಎಂಬ ಆರೋಪ ಕೇಳಿಬಂದಿದೆ.

ಪತಿ ಹಾಗೂ ಅತ್ತೆ-ಮಾವನ ವಿರುದ್ಧ ದೂರು
ಘಟನೆಯ ಬಳಿಕ ನಯನಾ ಅವರ ಪೋಷಕರು ಪತಿ ಸುನೀಲ್, ಅತ್ತೆ ಹಾಗೂ ಮಾವನ ವಿರುದ್ಧ ದೂರು ನೀಡಿದ್ದಾರೆ.
ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಮುಂದುವರೆಸಿದ್ದಾರೆ.
ಪ್ರಸ್ತುತ ಪೊಲೀಸರು ಪ್ರಕರಣದ ವಿವಿಧ ಆಯಾಮಗಳನ್ನು ಪರಿಶೀಲಿಸುತ್ತಿದ್ದು, ನಯನಾ ಅವರ ಸಾವಿನ ನಿಖರ ಕಾರಣ ತನಿಖೆಯಿಂದ ತಿಳಿದುಬರುವ ಸಾಧ್ಯತೆ ಇದೆ.
MUST WATCH : ತುಮಕೂರಿನಲ್ಲಿ ಯುವಕನಿಗೆ ಚಾಕು ಇರಿ* ಕೇಸ್ – SP ಅಶೋಕ್ ಶಾಕಿಂಗ್ ಸ್ಟೇಟ್ ಮೆಂಟ್




