
MANDYA CAUVERY ARTHI : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಾದ “ಕಾವೇರಿ ಆರತಿ”ಗೆ ಇಂದು ಅದ್ಧೂರಿ ಚಾಲನೆ ಸಿಗಲಿದೆ. ಮಂಡ್ಯ ಜಿಲ್ಲೆಯ ಕೆಆರ್ಎಸ್ (ಕೃಷ್ಣರಾಜ ಸಾಗರ KRS DAM ) ಬೋಟಿಂಗ್ ಪಾಯಿಂಟ್ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಸಲ್ಲಿಸಿ, ಆರತಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಇಂದಿನಿಂದ ಆರಂಭವಾಗುವ ಈ ಕಾರ್ಯಕ್ರಮ 5 ದಿನಗಳ ಕಾಲ ನಡೆಯಲಿದೆ. ಕಾರ್ಯಕ್ರಮದ ವಿಶೇಷತೆ ಎಂದರೆ, ಸ್ಥಳೀಯವಾಗಿ ಆಯ್ಕೆ ಮಾಡಲಾದ 12-13 ಪುರೋಹಿತರಿಗೆ ವಿಶೇಷ ತರಬೇತಿ ನೀಡಲಾಗಿದ್ದು, ಅವರು ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ನದಿಗೆ ಆರತಿ ಸಲ್ಲಿಸಲಿದ್ದಾರೆ. ಈ ಮೂಲಕ ನದಿಗೆ ಆಧ್ಯಾತ್ಮಿಕ ಮಹತ್ವವನ್ನು ನೀಡುವ ಪ್ರಯತ್ನ ನಡೆಯುತ್ತಿದೆ.
ಈ ಕಾರ್ಯಕ್ರಮವನ್ನು ರಾಜ್ಯದ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಯಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಭವಿಷ್ಯದಲ್ಲಿ “ಕಾವೇರಿ ಆರತಿ”ಯನ್ನು ನಿತ್ಯ ನಡೆಯುವ ಕಾರ್ಯಕ್ರಮವನ್ನಾಗಿ ಮಾಡುವ ದೃಷ್ಟಿಕೋನವೂ ಇದೆ.




