ವಿಶ್ವಕಪ್ ಗೆದ್ದ ಬೆನ್ನಲ್ಲೇ Hardik Pandya ಗೆ ಸಂಕಷ್ಟ.

2026 ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ ಸಂಭ್ರಮಾಚರಣೆ ವೇಳೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಕೀಲರೊಬ್ಬರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
Social Mediaದಲ್ಲಿ ಸಿಕ್ಕಾಪಟ್ಟೆ ವೈರಲ್
ಮಾರ್ಚ್ 8 ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಮಣಿಸುವ ಮೂಲಕ ಮೂರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ವೇಳೆ ಮೈದಾನದಲ್ಲಿ ಆಟಗಾರರು ಸೇರಿದಂತೆ ದೇಶದೆಲ್ಲೆಡೆ ಅಭಿಮಾನಿಗಳು ಸಂಭ್ರಮಿಸಿದ್ದರು. ಹಾರ್ದಿಕ್ ಪಾಂಡ್ಯ ಸಹ ನೃತ್ಯ ಮಾಡುತ್ತ ಗಮನ ಸೆಳೆದಿದ್ದರು. ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ರಾಷ್ಟ್ರಧ್ವಜದ ಘನತೆಗೆ ಧಕ್ಕೆ ತಂದಿದ್ದಾರೆ – Hardik Pandya
ಇನ್ನು ವೈರಲ್ ಆದ ವಿಡಿಯೋದಲ್ಲಿ ಅವರು ತಮ್ಮ ಗೆಳತಿ ಮಹಿಕಾ ಜೊತೆ ಸಂಭ್ರಮಿಸಿದ್ದರು. ಇದೇ ವೇಳೆ ಟ್ರೋಫಿ ಹಸ್ತಾಂತರಿಸಿದ ವೇದಿಕೆ ಮೇಲೆಯೆ ಗೆಳತಿಯೊಂದಿಗೆ ಹಾರ್ದಿಕ್ ಮಲಗಿದ್ದರು. ಇದಕ್ಕೆ ಪುಣೆ ಮೂಲದ ವಕೀಲ ವಾಜಿದ್ ಖಾನ್ ಆಕ್ಷೇಪ ವ್ಯಕ್ತಪಡಿಸಿದ್ದು ಹಾರ್ದಿಕ್ ರಾಷ್ಟ್ರಧ್ವಜದ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಸಿಲಾಗಿದ್ದು ದೂರು ಸ್ವೀಕರಿಸಿರುವುದಾಗಿ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
READ THIS : Tumakuru|ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ
ಇನ್ನು ವಿಡಿಯೋ ವೈರಲ್ ಆದ ನಂತರ ಕೆಲವರು ಪಾಂಡ್ಯ ಅವರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ರಾಷ್ಟ್ರಧ್ವಜವಾದ ತ್ರಿವರ್ಣ ಧ್ವಜದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಅಭಿಪ್ರಾಯವನ್ನು ಅನೇಕರು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ.

MUST WATCH : ಜಮೀನು ವಿಚಾರಕ್ಕೆ ಮಾರಾಮಾರಿ ಕೇಸ್ – ಪ್ರಕರಣಕ್ಕೆ ಎಂಟ್ರಿಯಾದ ಶಾಸಕರು




