ಡಿನ್ನರ್ ಪಾಲಿಟಿಕ್ಸ್ – ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ CM ಸಿದ್ದರಾಮಯ್ಯ.

ಕಾಂಗ್ರೆಸ್ನಲ್ಲಿ ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಮಾರ್ಚ್ 16ರಂದು ಮುಖ್ಯಮಂತ್ರಿಯವರ ಕಾವೇರಿ ನಿವಾಸದಲ್ಲಿ ಈ ಡಿನ್ನರ್ ಸಭೆ ನಡೆಯಲಿದೆ.
ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ CM ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.
ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ಹಿನ್ನೆಲೆ ಡಿಕೆ ಶಿವಕುಮಾರ್ ಅವರು ಡಿನ್ನರ್ ಮೀಟಿಂಗ್ ನಡೆಸಿದ್ದರು. ಅದರ ಬಳಿಕ ಮಾರ್ಚ್ 12ರಂದು ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿದ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಸಚಿವರಿಗೆ ಔತಣಕೂಟ
ಇನ್ನು ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ರೂಪಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಈ ಬೆಳವಣಿಗೆಗಳ ನಡುವೆಯೇ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಚರ್ಚೆಗೆ ಗ್ರಾಸವಾಗಿದೆ.
ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ
ಮಾರ್ಚ್ 16ರಂದು ನಡೆಯಲಿರುವ ಈ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.
ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
READ THIS : ಪಾಕ್ ಆಟಗಾರನ ಖರೀದಿಸಿದ Kavya Maran – ಭಾರೀ ಆಕ್ರೋಶ..!

ಇದರ ಜೊತೆಗೆ ಶೀಘ್ರದಲ್ಲೇ ಘೋಷಣೆಯಾಗಬಹುದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾವ ನಾಯಕರು ಭಾಗವಹಿಸಬೇಕು ಎಂಬುದರ ಕುರಿತೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಡಿಕೆ ಬಳಿಕ CM ಡಿನ್ನರ್
ಒಟ್ಟಿನಲ್ಲಿ ಸಿದ್ದು ಆಯೋಜಿಸಿರುವ ಈ ಔತಣಕೂಟ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಆಂತರಿಕ ರಾಜಕೀಯದ ಮೇಲೆ ಅದರ ಪರಿಣಾಮ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

MUST WATCH : ಚಿಕ್ಕಬಳ್ಳಾಪುರಕ್ಕೂ ತಟ್ಟಿದ ಯುದ್ಧದ ಎಫೆಕ್ಟ್ ಸಿಲಿಂಡರ್ ಸಿಗದೇ ಮಾಲೀಕರು ಕಂಗಾಲು




