Koppal : ಕೌಟುಂಬಿಕ ಕಲಹ, ಇಬ್ಬರು ಮಕ್ಕಳ ಸಮೇತ ಕೆರೆಗೆ ಹಾರಿದ ಅಮ್ಮ.

Koppal ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ತಾಯಿಯೊಬ್ಬಳು, ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕಳವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿದ ಬಾಳವ್ವ!
ಮೃತ ದುರ್ದೈವಿಗಳನ್ನು 35 ವರ್ಷದ ಬಾಳವ್ವ, ಹಾಗೂ 9 ವರ್ಷದ ಹುಲೀಗೆಮ್ಮ 8 ವರ್ಷದ ವಿಜಯಮ್ಮ ಎಂದು ಗುರುತಿಸಲಾಗಿದೆ. ಬಳವ್ವನ ಪತಿ ಶರಣಪ್ಪನ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಸಾವಿಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ.
READ THIS : ರಾಷ್ಟ್ರಧ್ವಜಕ್ಕೆ ಅವಮಾನ – Hardik Pandya ವಿರುದ್ಧ ದೂರು!

ಶವ ಹೊರ ತೆಗೆದ ಅಗ್ನಿಶಾಮಕ ಸಿಬ್ಬಂದಿ! – Koppal
ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಕೆರೆಯಿಂದ ತಾಯಿ ಮಕ್ಕಳ ಶವವನ್ನು ಹೊರತೆಗೆದಿದ್ದಾರೆ. ಈ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

MUST WATCH : E-KHATA ಸಮಸ್ಯೆ ಮುಕ್ತಿಗೆ ಕ್ರಮ – ತುಮಕೂರು ಪಾಲಿಕೆಯಿಂದ ಜನರಿಗೆ ಗುಡ್ ನ್ಯೂಸ್




