Gold ಬೆಲೆಯಲ್ಲಿ ಸತತ ಮೂರನೇ ದಿನವೂ ಭಾರೀ ಕುಸಿತ!

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಾಣಲಾರಂಭಿಸಿರುವುದು ಚಿನ್ನ ಖರೀದಿಸುವವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.
ಯುದ್ದ ಭೀತಿಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗುವ ಆತಂಕವಿತ್ತು
ಇರಾನ್–ಇಸ್ರೇಲ್ ಯುದ್ಧ ಭೀತಿಯಿಂದಾಗಿ ಚಿನ್ನದ ಬೆಲೆ ಹೆಚ್ಚಾಗಬಹುದು ಎಂಬ ಆತಂಕ ಇತ್ತಿಚೆಗೆ ವ್ಯಕ್ತವಾಗಿತ್ತು. ಅದರ ಪರಿಣಾಮವಾಗಿ ಮಾರ್ಚ್ 11ರಂದು 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹16,331ಕ್ಕೆ ಏರಿಕೆ ಕಂಡಿತ್ತು. ಆದರೆ ನಂತರ ಮಾರುಕಟ್ಟೆಯಲ್ಲಿ ಬೆಲೆ ಇಳಿಮುಖವಾಗತೊಡಗಿದೆ.

Gold ಹಾಗೂ ಬೆಳ್ಳಿ ಬೆಲೆಯಲ್ಲಿ ಸತತ 3 ದಿನದಿಂದ ಕುಸಿತ
ಇಂದು (ಮಾರ್ಚ್ 14) 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,030 ಇಳಿಕೆ ಕಂಡಿದ್ದು, ಪ್ರತಿ ಗ್ರಾಂ ಚಿನ್ನದ ಬೆಲೆ ₹15,966ಕ್ಕೆ ಇಳಿದಿದೆ. ಕಳೆದ ಮೂರು ದಿನಗಳಲ್ಲಿ 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಒಟ್ಟು ₹3,650 ರಷ್ಟು ಕುಸಿತವಾಗಿದೆ.
22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಇಳಿಕೆ
ಇನ್ನೊಂದೆಡೆ 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಇಳಿಕೆ ಮುಂದುವರಿದಿದೆ. ಇಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹950 ಇಳಿಕೆ ಕಂಡಿದೆ.
ಕಳೆದ ಮೂರು ದಿನಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಒಟ್ಟು ₹3,350 ಕುಸಿತವಾಗಿದ್ದು, ಪ್ರಸ್ತುತ ಪ್ರತಿ ಗ್ರಾಂ ಬೆಲೆ ₹14,635 ಆಗಿದೆ.
READ THIS : 44ನೇ ವರ್ಷಕ್ಕೆ Anushka Shetty ಗೆ ಒಲಿದ ಕಂಕಣ ಬಲ

ಬೆಳ್ಳಿ ಬೆಲೆಯಲ್ಲೂ ಇಂದು ಭಾರೀ ಇಳಿಕೆ
ಚಿನ್ನದ ಬೆಲೆ ಮಾತ್ರವಲ್ಲದೆ ಬೆಳ್ಳಿ ಬೆಲೆಯಲ್ಲೂ ಇಂದು ಭಾರೀ ಇಳಿಕೆ ಕಂಡಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇಂದು ಪ್ರತಿ ಕೆಜಿಗೆ ₹5,000 ಕಡಿಮೆಯಾಗಿದೆ.
ಇದರೊಂದಿಗೆ ಪ್ರಸ್ತುತ ಒಂದು ಕೆಜಿ ಬೆಳ್ಳಿ ಬೆಲೆ ₹2,75,000 ಆಗಿದೆ.
ಮಾರುಕಟ್ಟೆ ತಜ್ಞರ ಪ್ರಕಾರ, ಜಾಗತಿಕ ಆರ್ಥಿಕ ಪರಿಸ್ಥಿತಿ ಹಾಗೂ ಅಂತರರಾಷ್ಟ್ರೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರುಪೇರಾಗುವ ಸಾಧ್ಯತೆ ಇದೆ.

MUST WATCH : ಶಿರಾದಲ್ಲಿ ಡಿಸಿ ಜನ ಸಂಪರ್ಕ ಸಭೆ ಡಿಸಿಗೆ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ




