ಗ್ಯಾಸ್ ಅಭಾವ ವಿಚಾರದಲ್ಲಿ CM ಸಿದ್ದರಾಮಯ್ಯ ರಾಜಕೀಯ ಮಾಡಬಾರದು – ಆರ್. ಅಶೋಕ್

ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ CM ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
CM ಸಿದ್ದರಾಮಯ್ಯ ರಾಜಕೀಯ ಮಾಡಬಾರದು
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯುದ್ಧದ ಸಮಯದಲ್ಲಿ ರಾಜಕೀಯವನ್ನು ಬಿಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಿದರು. ಸಚಿವ ಮುನಿಯಪ್ಪ ಸರಿಯಾಗಿ ಮಾತನಾಡುತ್ತಾರೆ. ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದವರು. ಅವರಿಗೆ ಎಲ್ಲವೂ ಗೊತ್ತಿದೆ. ಸಿದ್ದರಾಮಯ್ಯ ಬೇರೆ ಕಡೆ ಹೋಗಿಲ್ಲ, ಇಲ್ಲಿ ಮಾತ್ರ ಇದ್ದಾರೆ. ಅವರಿಗೆ ಅದಕ್ಕೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.

READ THIS : ಯುದ್ಧದ ಎಫೆಕ್ಟ್ – ಏಕಾಏಕಿ ಕುಸಿದ ಮೊಟ್ಟೆಯ ದರ
ಸರ್ಕಾರ ಕೂಡ ಕ್ರಮ ತೆಗೆದುಕೊಳ್ಳಬೇಕು
ಗ್ಯಾಸ್ ಅಭಾವದ ವಿಚಾರವನ್ನು ರಾಜಕೀಯವಾಗಿ ಬಳಸದೇ, ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಅನಧಿಕೃತ ಗ್ಯಾಸ್ ಮಾರಾಟವನ್ನು ತಡೆಯಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅವರು, “ಕೇಂದ್ರ ಸರ್ಕಾರ ಈಗಾಗಲೇ ಎಸ್ಮಾ ಜಾರಿ ಮಾಡಿದೆ. ರಾಜ್ಯ ಸರ್ಕಾರ ಕೂಡ ಕ್ರಮ ತೆಗೆದುಕೊಳ್ಳಬೇಕು” ಎಂದರು.

MUST WATCH : SSLC ಪರೀಕ್ಷೆಗೆ COUNT DOWN ತುಮಕೂರಿನಲ್ಲಿ ಹೇಗಿದೆ ಸಿದ್ಧತೆ?




