ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ – KSRTC 2000 ಹೆಚ್ಚುವರಿ ಬಸ್ಗಳ ವ್ಯವಸ್ಥೆ.

ರಾಜ್ಯದ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಗುಡ್ನ್ಯೂಸ್ಒಂದನ್ನು ನೀಡಿದೆ. ಹಬ್ಬದ ದಿನಗಳಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರಿಗೆ ಸುಸೌಕರ್ಯ ಒದಗಿಸಲು ಸುಮಾರು 2000 ಹೆಚ್ಚುವರಿ ಬಸ್ಗಳನ್ನು ನಿಯೋಜಿಸಿದೆ.
2000 ಹೆಚ್ಚುವರಿ ಬಸ್ಗಳ ವ್ಯವಸ್ಥೆ
ಈ ವರ್ಷ ಯುಗಾದಿ ಹಬ್ಬವನ್ನು ಮಾರ್ಚ್ 19ರಂದು ಆಚರಿಸಲಾಗುತ್ತದೆ. ಅದಾದ ಬಳಿಕ ಮಾರ್ಚ್ 21ರಂದು ರಂಜಾನ್ ಹಬ್ಬವೂ ನಡೆಯಲಿದೆ. ಈ ಹಿನ್ನೆಲೆ ಮಾರ್ಚ್ 18, 19 ಹಾಗೂ 20ರಂದು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳತ್ತ ವಿಶೇಷ ಬಸ್ಗಳನ್ನು ಓಡಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಹಬ್ಬದ ನಂತರ ತಮ್ಮ ಕೆಲಸದ ಸ್ಥಳಗಳಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾರ್ಚ್ 22ರಂದು ರಾಜ್ಯದ ವಿವಿಧ ನಗರಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗುತ್ತದೆ.

ಪ್ರಮುಖ ನಗರಗಳಿಗೆ ವಿಶೇಷ ಬಸ್ ಸೇವೆ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಜ್ಯದ ಹಲವು ಧಾರ್ಮಿಕ ಹಾಗೂ ಪ್ರಮುಖ ನಗರಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಕೊಡಗು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ ಮತ್ತು ಬಳ್ಳಾರಿ ಸೇರಿದಂತೆ ಪ್ರಮುಖ ಧಾರ್ಮಿಕ ಮತ್ತು ನಗರಿಗಳಲ್ಲಿ ಹೆಚ್ಚುವರಿ ಬಸ್ಗಳು ಓಡಿಸಲಾಗುತ್ತವೆ.
ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಸಲಹೆ ನೀಡಿದೆ. ರಾಜ್ಯದ ಎಲ್ಲಾ ಬುಕ್ಕಿಂಗ್ ಕೌಂಟರ್ಗಳು ಹಾಗೂ ಅಧಿಕೃತ ವೆಬ್ಸೈಟ್ನಲ್ಲಿ ಟಿಕೆಟ್ ಬುಕ್ ಮಾಡಬಹುದು.
READ THIS : ಯುದ್ಧದ ಸಮಯದಲ್ಲಿ CM ರಾಜಕೀಯ ಮಾಡಬಾರದು – ಆರ್.ಅಶೋಕ್

ವಿಶೇಷ ರಿಯಾಯಿತಿ ಘೋಷಣೆ
ಇನ್ನು ಪ್ರಯಾಣಿಕರನ್ನು ಪ್ರೋತ್ಸಾಹಿಸಲು ಕೆಲವು ವಿಶೇಷ ರಿಯಾಯಿತಿಗಳನ್ನೂ ಘೋಷಿಸಲಾಗಿದೆ. ಒಂದೇ ವೇಳೆ ನಾಲ್ಕು ಅಥವಾ ಹೆಚ್ಚು ಜನರು ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ದೊರೆಯಲಿದೆ.
ಅದೇ ರೀತಿ ಹೋಗುವ ಹಾಗೂ ಬರುವ ಪ್ರಯಾಣವನ್ನು ಒಂದೇ ಬಾರಿ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುತ್ತದೆ ಎಂದು ಸಾರಿಗೆ ನಿಗಮ ತಿಳಿಸಿದೆ.
ರಾಜ್ಯಗಳ ಪ್ರಮುಖ ನಗರಗಳಿಗೂ ಮುಂಗಡ ಬುಕ್ಕಿಂಗ್ ಸೌಲಭ್ಯ
ಅಲ್ಲದೇ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿ ರಾಜ್ಯಗಳ ಪ್ರಮುಖ ನಗರಗಳಿಗೂ ಮುಂಗಡ ಬುಕ್ಕಿಂಗ್ ಸೌಲಭ್ಯ ಲಭ್ಯವಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MUST WATCH : “ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್..! GOLD RATE ಕೇಳಿ ಜನ ಫುಲ್ ಖುಷ್”




