
BAGALKOT SUCIDE NEWS : ಬಾಗಲಕೋಟೆ ನಗರದ ವಿದ್ಯಾಗಿರಿಯ ಖಾಸಗಿ PG ಯೊಂದರಲ್ಲಿ PUC ವಿದ್ಯಾರ್ಥಿನಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ಯುವತಿ ಯನ್ನು ಸುನಗ ತಾಂಡಾದ ಸೀಮಾ ರಾಠೋಡ (17) ಎಂದು ಗುರುತಿಸಲಾಗಿದೆ.
ಸೀಮಾ, ನಗರದಲ್ಲಿನ ಖಾಸಗಿ PU ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದರು. PG ಯಲ್ಲಿ ಕೆಲವು ವಿದ್ಯಾರ್ಥಿನಿಯರು ರೂಮ್ ಒಳಗೆ ಹೋಗುತ್ತಿದ್ದಂತೆ ಯುವತಿಯ ಮೃತದೇಹ ಸ್ಲ್ಯಾಬ್ನ ಹುಕ್ನಲ್ಲಿ ನೇತಾಡುತ್ತಿರುವುದನ್ನು ಕಂಡು ಕಿರುಚಾಡುತ್ತ ಹೊರಗೆ ಓಡಿ ಬಂದಿದ್ದಾರೆ.
ಇನ್ನು ಈ ಘಟನೆಯು ಪಿಜಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯರು ಹೊರಗೆ ಬಂದಿದ್ದನ್ನು ಕಂಡು, ಪಿಜಿಯ ಭದ್ರತಾ ಸಿಬ್ಬಂದಿ ಬಂದು ನೋಡಿದ್ದಾರೆ. ಬಳಿಕ ನೇಣು ಬಿಚ್ಚಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಜಿಲ್ಲಾಸ್ಪತ್ರೆ ವೈದ್ಯರು ಪರೀಕ್ಷಿಸಿ ಯುವತಿ ಮೃತ ಪಟ್ಟಿದ್ದನ್ನು ಖಚಿತಪಡಿಸಿದ್ದಾರೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಈ ಬಗ್ಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.
#pstvk
#sucide
#bagalkotsuicidecase




