ಹಾಸನ ಜಿಲ್ಲೆಯ Channarayapatna ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಲೋಕೇಶ್ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನ ಜಿಲ್ಲೆಯ Channarayapatna ಪಟ್ಟಣದಲ್ಲಿ ದುಃಖಕರ ಘಟನೆ ಸಂಭವಿಸಿದೆ. ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಲೋಕೇಶ್ (45) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಮಾಹಿತಿಯ ಪ್ರಕಾರ, ಶನಿವಾರ ರಾತ್ರಿ ತಮ್ಮ ಮನೆಯಲ್ಲೇ ಲೋಕೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST READ : LPG ಉಳಿತಾಯದಲ್ಲಿ Siddaganga Mutt ಕ್ರಾಂತಿ – ನಿತ್ಯ 30,000ಕ್ಕೂ ಹೆಚ್ಚು ಮಂದಿಗೆ ಅನ್ನ ದಾಸೋಹ..!!

ಲೋಕೇಶ್ ಅವರು ಮೊದಲು ಹಾಸನ ಜಿಲ್ಲೆಯ ಗುಡ್ಡೇನಹಳ್ಳಿ ಪ್ರದೇಶದಲ್ಲಿ ಇರುವ ಎರಡು ಬಿಸಿಎಂ ಹಾಸ್ಟೆಲ್ಗಳಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇತ್ತೀಚೆಗೆ ಅವರಿಗೆ ಮ್ಯಾನೇಜರ್ ಹುದ್ದೆಗೆ ಬಡ್ತಿ ದೊರಕಿತ್ತು. ನಂತರ ಅವರು ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು..

ಸದ್ಯಕ್ಕೆ ಲೋಕೇಶ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಟುಂಬಸ್ಥರು ಹಾಗೂ ಪರಿಚಿತರಲ್ಲಿ ಈ ಘಟನೆ ಆಘಾತ ಮೂಡಿಸಿದೆ.
ಪೊಲೀಸರು ವಿವಿಧ ಕೋನಗಳಿಂದ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ.
ಈ ಘಟನೆ ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
MUST WATCH : ತುಮಕೂರಿಗರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ | TUMAKURU NEWS |




