RCB ಫ್ಯಾನ್ಸ್ಗೆ ಭರ್ಜರಿ ಸಿಹಿಸುದ್ದಿ ಕಾದಿದೆ.

ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ ಆರ್ಸಿಬಿ ಫ್ಯಾನ್ಸ್ಗಳಿಗೆ ಭರ್ಜರಿ ಸಿಹಿಸುದ್ದಿ ಕಾದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ IPL ಪಂದ್ಯಗಳನ್ನು ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ‘ನಮ್ಮ ಮೆಟ್ರೋ’ದಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆಗಳು ಜೋರಾಗಿವೆ.
KSCA ಹಾಗೂ RCB ಮ್ಯಾನೇಜ್ಮೆಂಟ್ ನಡುವೆ ಮಹತ್ವದ ಮಾತುಕತೆ
ಪಂದ್ಯದ ದಿನಗಳಲ್ಲಿ ಕ್ರೀಡಾಂಗಣದ ಸುತ್ತಮುತ್ತ ಉಂಟಾಗುವ ಭಾರೀ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL), ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ಹಾಗೂ RCB ಮ್ಯಾನೇಜ್ಮೆಂಟ್ ನಡುವೆ ಮಹತ್ವದ ಮಾತುಕತೆ ನಡೆಯುತ್ತಿದೆ. ಐಪಿಎಲ್ ಅಭಿಮಾನಿಗಳಿಗೆ ಸುಲಭ ಪ್ರಯಾಣದ ವ್ಯವಸ್ಥೆ ಒದಗಿಸಲು ವಿಶೇಷ ಯೋಜನೆ ರೂಪಿಸಲಾಗುತ್ತಿದೆ.

ಏನಿದೆ ಉಚಿತ ಮೆಟ್ರೋ ಪ್ರಯಾಣದ ಯೋಜನೆ?
ಈ ಯೋಜನೆ ಜಾರಿಯಾದರೆ, ಐಪಿಎಲ್ ಪಂದ್ಯ ಟಿಕೆಟ್ ಹೊಂದಿರುವವರಿಗೆ ಮೆಟ್ರೋ ಪ್ರಯಾಣಕ್ಕಾಗಿ ಪ್ರತ್ಯೇಕ ಟಿಕೆಟ್ ತೆಗೆದುಕೊಳ್ಳಬೇಕಾಗಿಲ್ಲ.
ಪಂದ್ಯ ಟಿಕೆಟ್ ಮೇಲೆಯೇ ಕ್ಯೂಆರ್ ಕೋಡ್ ಅಳವಡಿಸಲಾಗುತ್ತದೆ. ಆ ಕ್ಯೂಆರ್ ಕೋಡ್ ಅನ್ನು ಮೆಟ್ರೋ ನಿಲ್ದಾಣದಲ್ಲಿ ಸ್ಕ್ಯಾನ್ ಮಾಡಿದರೆ ನಗರದ ಯಾವುದೇ ಮೆಟ್ರೋ ಸ್ಟೇಷನ್ನಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದವರೆಗೆ ಉಚಿತವಾಗಿ ಪ್ರಯಾಣಿಸುವ ಅವಕಾಶ ದೊರೆಯಲಿದೆ.
ಈ ವಿಶೇಷ ಸೌಲಭ್ಯ ಕೇವಲ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್ಸಿಬಿ ಪಂದ್ಯಗಳ ದಿನಗಳಲ್ಲಿ ಮಾತ್ರ ಅನ್ವಯವಾಗಲಿದೆ ಎನ್ನಲಾಗಿದೆ.

ಪ್ರಾಥಮಿಕ ಹಂತದಲ್ಲೇ ಚರ್ಚೆ
ಮ್ಯಾಚ್ ಟಿಕೆಟ್ ತೋರಿಸಿ ಮೆಟ್ರೋ ಪ್ರಯಾಣ ಉಚಿತಗೊಳಿಸುವ ಯೋಜನೆ ಕುರಿತು ಬಿಎಂಆರ್ಸಿಎಲ್, ಕೆಎಸ್ಸಿಎ ಮತ್ತು ಆರ್ಸಿಬಿ ಮ್ಯಾನೇಜ್ಮೆಂಟ್ ನಡುವೆ ಪ್ರಾಥಮಿಕ ಹಂತದ ಮಾತುಕತೆ ನಡೆಯುತ್ತಿದೆ.
ತಾಂತ್ರಿಕವಾಗಿ ಈ ಯೋಜನೆಯನ್ನು ಹೇಗೆ ಜಾರಿಗೆ ತರಬಹುದು, ಇದರ ಲಾಭ-ನಷ್ಟಗಳೇನು ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
READ THIS : Channarayapatna ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ Suicide..!

ಮಾರ್ಚ್ 28ರಂದು ಮೊದಲ ಪಂದ್ಯ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ಈ ಆವೃತ್ತಿಯ ಮೊದಲ ಪಂದ್ಯ ನಡೆಯಲಿದ್ದು, ಬಲಿಷ್ಠ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ಸಿಬಿ ತಂಡ ಸೆಣಸಾಡಲಿದೆ.
ಇತ್ತೀಚೆಗೆ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಪಂದ್ಯಗಳನ್ನು ಇಲ್ಲಿ ನಡೆಸುವುದಿಲ್ಲ ಎಂಬ ವದಂತಿಗಳು ಹರಡಿದ್ದವು.
ಆದರೆ ಆಡಳಿತ ಮಂಡಳಿ ಮತ್ತು ಪೊಲೀಸರಿಂದ ಅಗತ್ಯ ಅನುಮತಿ ಪಡೆದು ಪಂದ್ಯಗಳನ್ನು ಅದ್ಧೂರಿಯಾಗಿ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.
ಇದೀಗ ಮೆಟ್ರೋ ಉಚಿತ ಪ್ರಯಾಣದ ಯೋಜನೆಯ ಪ್ರಸ್ತಾಪ ಕೇಳಿಬಂದಿರುವುದು ಕ್ರಿಕೆಟ್ ಅಭಿಮಾನಿಗಳ ಸಂತಸವನ್ನು ಮತ್ತಷ್ಟು ಹೆಚ್ಚಿಸಿದೆ.

MUST WATCH : ಕ್ರೀಡಾ ತರಬೇತಿ ಕೇಂದ್ರಗಳ ಲೋಕಾರ್ಪಣೆ – SPORTS CITYಯತ್ತ ನಮ್ಮ ತುಮಕೂರು




