ರಾಯಚೂರಿನಲ್ಲಿ ಕೊಡಲಿಯಿಂದ ಹೊಡೆದು ಯುವಕನ Murder ಮಾಡಲಾಗಿದೆ.

ಹಳೆ ದ್ವೇಷದ ಹಿನ್ನೆಲೆ ಯುವಕನೋರ್ವನನ್ನು ಕೊಡಲಿಯಿಂದ ಹೊಡೆದು Murder ಮಾಡಿರುವ ಘಟನೆ ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ.
ಐವರಿಂದ ಕೊಲೆ
ಬುಳ್ಳಾಪುರ ಗ್ರಾಮದ ಪ್ರಾಣೇಶ್ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ದಿನ್ನಿ ಗ್ರಾಮದ ಪ್ರಸಾದ್, ಮಲ್ಲೇಶ್, ಮಲ್ಲಿಕಾರ್ಜುನ್ ಮತ್ತು ಅಮರೇಶ್ ಎಂಬುವವರಿಂದ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.

READ THIS : ಸ್ವರ್ಣ ಪ್ರಿಯರಿಗೆ ಸಿಹಿ ಸುದ್ದಿ – ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ
ಕೊಡಲಿಯಿಂದ ಹೊಡೆದು Murder
ಬುಳ್ಳಾಪುರದಲ್ಲಿ ಜಾಗದ ವಿಷಯವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ತಾಯಿ ಎದುರಲ್ಲೇ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಪ್ರಾಣೇಶ್ ನನ್ನು ಆಸ್ಪತ್ರೆಗೆ ಸಾಗಿಸಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನತೆ ಉಂಟುಮಾಡಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

MUST WATCH : ಸಾಲಭಾದೆಗೆ ಮನನೊಂದ ರೈತ – ಕೆರೆಗೆ ಹಾರಿ ಪ್ರಾಣಬಿಟ್ಟ ಅನ್ನದಾತ




