SSLC ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ…

ಕರ್ನಾಟಕದಲ್ಲಿ SSLC ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಸೌಲಭ್ಯ ನೀಡಲಾಗಿದೆ. ಯೋಜನೆಯಡಿ ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಬಹುದು.
ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆ
ಈ ವರ್ಷದ SSLC ವಾರ್ಷಿಕ ಪರೀಕ್ಷೆಗಳು 18-03-2026 ರಿಂದ 02-04-2026ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾರಿಗೆ ಸೌಲಭ್ಯ ಒದಗಿಸಲಾಗಿದೆ.
ಪ್ರವೇಶ ಪತ್ರ ತೋರಿಸಿದರೆ ಉಚಿತ ಪ್ರಯಾಣ
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ SSLC ಪರೀಕ್ಷೆಯ ಪ್ರವೇಶ ಪತ್ರ (Hall Ticket) ತೋರಿಸಿ ಕೆಳಗಿನ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
- ನಗರ ಬಸ್ಸುಗಳು
- ಹೊರವಲಯ ಬಸ್ಸುಗಳು
- ಸಾಮಾನ್ಯ ಬಸ್ಸುಗಳು
- ವೇಗದೂತ ಬಸ್ಸುಗಳು
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಈ ಸೌಲಭ್ಯವನ್ನು ಪಡೆಯಬಹುದು.
MUST READ : Bengaluru ಕರಗ ಶಕ್ತ್ಯೋತ್ಸವ 2026 – ಮೈಸೂರು ದಸರಾ ಶೈಲಿಯಲ್ಲಿ ಅದ್ಧೂರಿ ಆಚರಣೆ

ವಿದ್ಯಾರ್ಥಿಗಳಿಗೆ KSRTC ಮನವಿ
ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು KSRTC ಮನವಿ ಮಾಡಿದೆ.
ಈ ಕ್ರಮದಿಂದ ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಸಾರಿಗೆ ತೊಂದರೆ ಇಲ್ಲದೆ ಸುಲಭವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಬಹುದು.
MUST WATCH : ತಿಪಟೂರಿನಲ್ಲಿ ಬೋನಿಗೆ ಬಿದ್ದ ಚಿರತೆ – ಸೆರೆ ಸಿಕ್ಕರು ಜನರಿಗೆ ತಪ್ಪದ ಸಂಕಷ್ಟ | TIPTUR NEWS |




