ನಾಳೆಯಿಂದ ಏಪ್ರಿಲ್ 2ರವರೆಗೆ ನಡೆಯುವ SSLC ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ…

ನಾಳೆಯಿಂದ ರಾಜ್ಯದಲ್ಲಿ SSLC ಪರೀಕ್ಷೆಗಳು ಆರಂಭವಾಗಲಿವೆ. ಈ ಪರೀಕ್ಷೆಗಳು ಏಪ್ರಿಲ್ 2ರವರೆಗೆ ನಡೆಯಲಿವೆ.
ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಶುಭ ಕೋರಿದ್ದಾರೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ “ಆಲ್ ದಿ ಬೆಸ್ಟ್” ತಿಳಿಸಿದ್ದಾರೆ.
ಇದೇ ವೇಳೆ, ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಸಿಎಂ ತಿಳಿಸಿದ್ದಾರೆ. ಸರ್ಕಾರವು ಹಲವು ಸುಧಾರಣೆಗಳನ್ನು ಮಾಡಿದ್ದು, ಮೂರು ಪರೀಕ್ಷೆಗಳ ಅವಕಾಶ ನೀಡಲಾಗಿದೆ ಎಂದಿದ್ದಾರೆ.
MUST READ : Raichur ನಲ್ಲಿ KKRTC ಬಸ್ ಹರಿದು ಮಹಿಳೆ ಸಾವು..!!

ಬಹು ಅವಕಾಶ – ವಿದ್ಯಾರ್ಥಿಗಳಿಗೆ ಅನುಕೂಲ
ಒಂದು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಿಗದಿದ್ದರೂ, ಮತ್ತೊಂದು ಪರೀಕ್ಷೆಯಲ್ಲಿ ಬರೆಯುವ ಅವಕಾಶ ಇರುವುದರಿಂದ ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆಯಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳ ಯಶಸ್ಸಿಗೆ ಹಾರೈಕೆ
ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲಿ ಎಂದು ಸಿಎಂ ಹಾರೈಸಿದ್ದಾರೆ. ಸರ್ಕಾರದ ಪರವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
MUST WATCH : ರಾಜ್ಯದಲ್ಲಿ ಮಾ. 21ರ ವರೆಗೆ ಭಾರೀ ಮಳೆ – ಯಾವ ಯಾವ ಜಿಲ್ಲೆಗಳಿಗೆ ALERT




