ರೈಲ್ವೆ ನೇಮಕಾತಿ ಕೋಶ (RRC), ದಕ್ಷಿಣ ಮಧ್ಯ ರೈಲ್ವೆ (SCR) 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Railway Recruitment : ರೈಲ್ವೆ ನೇಮಕಾತಿ ಕೋಶ (RRC), ದಕ್ಷಿಣ ಮಧ್ಯ ರೈಲ್ವೆ (SCR) ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಅಧಿಸೂಚನೆಯಡಿಯಲ್ಲಿ ಒಟ್ಟು 2,801 ಖಾಲಿ ಹುದ್ದೆಗಳು ಲಭ್ಯವಿದ್ದು, ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, ಸಿಗ್ನಲ್ & ಟೆಲಿಕಾಂ (S&T) ಸೇರಿದಂತೆ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಇನ್ನು ಅರ್ಹ ಅಭ್ಯರ್ಥಿಗಳು ಏಪ್ರಿಲ್ 11, 2026ರ ರಾತ್ರಿ 11.59ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ 50% ಅಂಕಗಳನ್ನು ಪಡೆದಿರಬೇಕು. ಜೊತೆಗೆ, ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಸಿಒಪಿಎ, ಡೀಸೆಲ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಮೆಷಿನಿಸ್ಟ್, ಎಂಎಂಟಿಎಂ, ಮೋಟಾರ್ ಮೆಕ್ಯಾನಿಕ್, ಪೇಂಟರ್, ವೆಲ್ಡರ್ ಸೇರಿದಂತೆ ಸಂಬಂಧಿತ ವೃತ್ತಿಗಳಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
READ THIS : ಮತ್ತೆ ಏರಿಕೆ ಕಂಡ Gold – ಇಂದಿನ ಬೆಲೆಯೆಷ್ಟಿದೆ ಚೆಕ್ ಮಾಡಿ

ವಯೋಮಿತಿ
ಅಭ್ಯರ್ಥಿಗಳ ವಯಸ್ಸಿನ ಮಿತಿ ಏಪ್ರಿಲ್ 11, 2026 ರಂತೆ 15 ರಿಂದ 24 ವರ್ಷಗಳ ನಡುವೆ ಇರಬೇಕು. ಎಸ್ಸಿ, ಎಸ್ಟಿಗಳಿಗೆ ಐದು ವರ್ಷಗಳು, ಒಬಿಸಿಗಳಿಗೆ ಮೂರು ವರ್ಷಗಳು ಮತ್ತು ಪಿಡಬ್ಲ್ಯೂಬಿಡಿ ಮತ್ತು ಇಎಸ್ಎಂ ಅಭ್ಯರ್ಥಿಗಳಿಗೆ ಹತ್ತು ವರ್ಷಗಳವರೆಗೆ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು ₹100 ನೋಂದಣಿ ಶುಲ್ಕವನ್ನು ಪಾವತಿಸಬೇಕು. ಆದರೆ ಎಸ್ಸಿ, ಎಸ್ಟಿ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
ಈ ನೇಮಕಾತಿಗೆ ಯಾವುದೇ ಲಿಖಿತಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯುತ್ತದೆ.

ತರಬೇತಿ ಮತ್ತು ಸ್ಟೈಫಂಡ್
ಆಯ್ಕೆಯಾದ ಅಭ್ಯರ್ಥಿಗಳಿಗೆ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳ ರೈಲ್ವೆ ಘಟಕಗಳಲ್ಲಿ ಒಂದು ವರ್ಷದ ತರಬೇತಿ ನೀಡಲಾಗುತ್ತದೆ.
ತರಬೇತಿ ಅವಧಿಯಲ್ಲಿ ನಿಯಮಾನುಸಾರ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
MUST WATCH : ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬಿಜೆಪಿ ಶಾಸಕ ಮುನಿರತ್ನ ಟಾಂಗ್




