Prajwal Revanna ಕೇಸ್ – ಪೆನ್ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ.

ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಪ್ರಜ್ವಲ್ ರೇವಣ್ಣ ಸಂಬಂಧಿತ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ 13,712 ಪುಟಗಳ ವಿವರವಾದ ಚಾರ್ಜ್ಶೀಟ್ ಸಲ್ಲಿಸಿದೆ.
52 ಮಂದಿಯ ಹೆಸರು ಉಲ್ಲೇಖ
ಈ ಪ್ರಕರಣದಲ್ಲಿ ಒಟ್ಟು 52 ಮಂದಿಯ ಹೆಸರು ಉಲ್ಲೇಖವಾಗಿದ್ದು, ಅವರಲ್ಲಿ 39 ಮಂದಿಯ ವಿರುದ್ಧ ಸಾಕ್ಷ್ಯಾಧಾರಗಳೊಂದಿಗೆ ಆರೋಪಗಳನ್ನು ದೃಢಪಡಿಸಲಾಗಿದೆ ಎಂದು SIT ತಿಳಿಸಿದೆ. 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು.

ಅಶ್ಲೀಲ ವಿಡಿಯೋಗಳನ್ನು ಹಂಚಿಕೆ
ತನಿಖೆಯ ವೇಳೆ ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್ಡ್ರೈವ್ಗಳನ್ನು ಖರೀದಿಸಿ, ಅವುಗಳ ಮೂಲಕ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವುದು ಬಹಿರಂಗವಾಗಿದೆ.
ಒಟ್ಟು 277 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ತಾಂತ್ರಿಕ ಸಾಕ್ಷ್ಯಗಳು ಹಾಗೂ ಫೋರೆನ್ಸಿಕ್ ವರದಿಗಳ ಆಧಾರದಲ್ಲಿ ದೋಷಾರೋಪಣೆ ಮಾಡಲಾಗಿದೆ.
READ THIS : ವೃದ್ಧ ತಂದೆಯನ್ನೇ ಚೀಲದಲ್ಲಿ ಕಟ್ಟಿ ಪಾರ್ಸೆಲ್ ! ಬೆಂಗಳೂರಲ್ಲಿ ಅಮಾನುಷ ಕೃತ್ಯ
ಒಟ್ಟು 39 ಮಂದಿಯ ವಿರುದ್ಧ ಆರೋಪ
ಪ್ರಕರಣದಲ್ಲಿ ಎ1 ನವೀನ್, ಎ2 ಕಾರ್ತಿಕ್ ಎನ್ (ಪ್ರಜ್ವಲ್ ಅವರ ಕಾರು ಚಾಲಕ), ಎ3 ಚೇತನ್ ಬಿಸಿ, ಎ4 ಚೇತನ್ ವೈ ಎಸ್, ಎ5 ಲಿಖಿತ್ ಗೌಡ ಸೇರಿದಂತೆ ಒಟ್ಟು 39 ಮಂದಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಇದಲ್ಲದೆ, ಪ್ರೀತಮ್ ಗೌಡ ಹಾಗೂ ಶ್ರೇಯಸ್ ಪಾಟೀಲ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ಹೆಸರುಗಳೂ ಪ್ರಕರಣದಲ್ಲಿ ಕಾಣಿಸಿಕೊಂಡಿರುವುದು ಗಮನಾರ್ಹವಾಗಿದೆ.

ಚಾರ್ಜ್ಶೀಟ್ನಲ್ಲಿ Prajwal Revanna ಹೆಸರು ಸೇರಿಸಿಲ್ಲ
ಇನ್ನು ಮಹಿಳೆಯರ ಸಮ್ಮತಿಯಿಲ್ಲದೆ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸಿ, ಪೆನ್ಡ್ರೈವ್ಗಳ ಮೂಲಕ ಹಂಚಿಕೆ ಮಾಡಿದ ಆರೋಪಗಳನ್ನು SIT ದೃಢಪಡಿಸಿದೆ. ಆದರೆ, ಈ ಚಾರ್ಜ್ಶೀಟ್ನಲ್ಲಿ Prajwal Revanna ಅವರ ಹೆಸರು ಸೇರಿಸಿಲ್ಲ ಎಂಬುದು ಮತ್ತೊಂದು ಪ್ರಮುಖ ವಿಚಾರವಾಗಿದ್ದು, ಮುಂದಿನ ನ್ಯಾಯಾಲಯದ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.
MUST WATCH : ಇಂದಿನಿಂದ SSLC EXAM – ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶುಭಾಶಯ ಕೋರಿದ ABVP




