Kolar ಜಿಲ್ಲೆಯ ಸೀಸಂದ್ರ ಗ್ರಾಮದ ಹೆಡ್ ಕಾನ್ಸ್ಟೇಬಲ್ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ…

Kolar ಜಿಲ್ಲೆಯ ಸೀಸಂದ್ರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. 50 ವರ್ಷದ ವೆಂಕಟರಮಣಪ್ಪ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಕೆಜಿಎಫ್ ಜಿಲ್ಲಾ ಪೊಲೀಸರ ಊರಿಗಾಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ತೂಕ ಕಡಿಮೆ ಮಾಡುವ ಉದ್ದೇಶದಿಂದ ವೆಂಕಟರಮಣಪ್ಪ ಡಯಟ್ ಮತ್ತು ಕೆಲವು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆದರೆ, ಇಂದು ಮುಂಜಾನೆ ಮನೆಯಲ್ಲೇ ಹೃದಯಾಘಾತಕ್ಕೊಳಗಾದರು.
MUST READ : Gadag : ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು..!!

ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು
ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿ ಶೋಕ
ಈ ಅಕಾಲಿಕ ನಿಧನದಿಂದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಜೊತೆಗೆ ಪೊಲೀಸ್ ಇಲಾಖೆಯಲ್ಲಿಯೂ ಶೋಕ ವಾತಾವರಣ ನಿರ್ಮಾಣವಾಗಿದೆ.
MUST WATCH : ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕ್ರಮ – ಚುನಾವಣೆಯನ್ನೇ ರದ್ದು ಮಾಡಿದ ಅಧಿಕಾರಿಗಳು | KUNIGAL NEWS |




