ಶಿವಾನಂದ ಮಠದ ಪೀಠಾಧಿಪತಿ Suicide.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ಅವರು ನೇಣು ಬಿಗಿದುಕೊಂಡು Suicide ಮಾಡಿಕೊಂಡಿದ್ದಾರೆ.
ರಾಯಚೂರು ಮುಖ್ಯ ಶಿಕ್ಷಕ ದೇವೇಂದ್ರಪ್ಪ ದುರಂತ ಅಂತ್ಯ
ದೇವೇಂದ್ರಪ್ಪ ಸ್ವಾಮಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರು ಸರ್ಕಾರಿ ಸೇವೆಯಲ್ಲಿದ್ದಾಗಲೇ ಮಠವನ್ನು ನಿರ್ಮಿಸಿದ್ದರು. ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಜೀವನದಲ್ಲಿ ವೈರಾಗ್ಯ ಮೂಡಿ ಮಠ ಸ್ಥಾಪಿಸಿದ್ದರು. ಶಾಲಾ ಅವಧಿ ನಂತರ ಸಂಜೆ ವೇಳೆ ಮಠದಲ್ಲಿ ಧಾರ್ಮಿಕ ಪ್ರವಚನಗಳನ್ನು ನೀಡುತ್ತಿದ್ದರು.

READ THIS : ಎಲ್ಪಿಜಿ ಕೊರತೆ ಸರಿಪಡಿಸಿ – ಪೆಟ್ರೋಲಿಯಂ ಸಚಿವರಿಗೆ CM ಮನವಿ
Suicide ಗೆ ಕಾರಣವೇನು?
ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗುಳಗುಳಿ ಗ್ರಾಮದವರಾದ ಅವರು, ಕಳೆದ 20 ವರ್ಷಗಳಿಂದ ಸಿಂಧನೂರು ತಾಲೂಕಿನಲ್ಲೇ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕುಟುಂಬದಿಂದ ದೂರವಿದ್ದ ಅವರುಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಭಕ್ತರು ಹಾಗೂ ಗ್ರಾಮಸ್ಥರು ಖಿನ್ನತೆ ಕಾರಣವಾಗಿರಬಹುದು ಎಂದು ಶಂಕಿಸುತ್ತಿದ್ದಾರೆ.
ಪ್ರಕರಣ ದಾಖಲು
ಮಠದ ಭೋಜನಾ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದೇವೇಂದ್ರಪ್ಪ ಸ್ವಾಮಿಯವರ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

MUST WATCH : ಹೈವೇ ನಿರ್ಮಾಣದಿಂದ ಜನರಿಗೆ ಸಂಕಷ್ಟ – ಕೆಳ ಸೇತುವೆ ನಿರ್ಮಿಸದಿದ್ದರೆ ಉಗ್ರ ಹೋರಾಟ




