Gadag ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ…

Gadag ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ದುರ್ಘಟನೆಯಲ್ಲಿ ಸರ್ಕಾರಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ.
ಘಟನೆ ಹೇಗೆ ನಡೆದಿದೆ?
48 ವರ್ಷದ ಚೆನ್ನಮ್ಮ ಹಡಪದ ಮೃತ ಮಹಿಳೆಯಾಗಿದ್ದು, ಅವರು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿಯಾಗಿದ್ದರು. ಸಂಬಂಧಿಕರ ಮನೆಗೆ ಹೋಗುವ ಉದ್ದೇಶದಿಂದ ಶಿರಹಟ್ಟಿಗೆ ತೆರಳುತ್ತಿದ್ದ ಅವರು ಮಧ್ಯಾಹ್ನ ವೇಳೆಗೆ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಇಳಿದಿದ್ದರು.
MUST READ : Dina Bhavishya : ದಿನ ಭವಿಷ್ಯ 21 ಮಾರ್ಚ್ 2026..

ಆದರೆ, ನಂತರ ಮೂತ್ರ ವಿಸರ್ಜನೆಗಾಗಿ ತೆರಳುತ್ತಿದ್ದ ವೇಳೆ ವೇಗವಾಗಿ ನಿಲ್ದಾಣದೊಳಕ್ಕೆ ಬಂದ ಸರ್ಕಾರಿ ಬಸ್ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ನ ಹಿಂದಿನ ಎರಡು ಚಕ್ರಗಳು ಮಹಿಳೆಯ ಎರಡೂ ಕಾಲುಗಳ ಮೇಲೆ ಹರಿದಿದ್ದು, ನೆಲಕ್ಕೆ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವ ಉಂಟಾಗಿದೆ.
ಆಸ್ಪತ್ರೆಗೆ ಸಾಗಿಸಿದರೂ ಬದುಕು ಉಳಿಯಲಿಲ್ಲ
ಘಟನೆ ಸಂಭವಿಸಿದ ತಕ್ಷಣ ಗಾಯಾಳು ಮಹಿಳೆಯನ್ನು ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ ಗಾಯದ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಇದಾದ ಬಳಿಕ, ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಮಹಿಳೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಸ್ ಚಾಲಕ ವಶಕ್ಕೆ – ಪ್ರಕರಣ ದಾಖಲು
ಈ ಅಪಘಾತಕ್ಕೆ ಕಾರಣವಾದ ಬಸ್ ಗದಗದ ಬೆಟಗೇರಿ ಡಿಪೋಗೆ ಸೇರಿದ್ದು, ಗದಗದಿಂದ ಲಕ್ಷ್ಮೇಶ್ವರ–ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
MUST WATCH : PAVAGADA | ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇರುವಾಗ್ಲೇ ಕಚೇರಿಯಲ್ಲೇ ಅಧಿಕಾರಿ ಸೂ**ಡ್ |




