Raichur ಜಿಲ್ಲೆಯಲ್ಲಿ ಯುಗಾದಿ ಕರಿ ಹಿನ್ನೆಲೆ ಹೋಳಿ ಬಳಿಕ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ಕಾಲುವೆ ಮತ್ತು ಕೆರೆಯಲ್ಲಿ ಮುಳುಗಿ ಮೃತಪಟ್ಟ ಪ್ರತ್ಯೇಕ ಘಟನೆಗಳು ನಡೆದಿವೆ.

Raichur ಜಿಲ್ಲೆಯಲ್ಲಿ ಯುಗಾದಿ ಕರಿ ಹಿನ್ನೆಲೆಯಲ್ಲಿ ಹೋಳಿ ಆಟವಾಡಿದ ಬಳಿಕ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ದುರ್ಘಟನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಂಭವಿಸಿವೆ. ಈ ಘಟನೆಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ.
ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು
ಮೊದಲ ಘಟನೆ ಜಿಲ್ಲೆಯ ಅರಕೇರಾ ತಾಲೂಕಿನ ನಾಗೋಲಿ ಗ್ರಾಮದ ಸಮೀಪ ನಾರಾಯಣಪೂರ ಬಲದಂಡೆ ಕಾಲುವೆಯಲ್ಲಿ ನಡೆದಿದೆ. ಹೋಳಿ ಬಳಿಕ ಸ್ನೇಹಿತರೊಂದಿಗೆ ಸ್ನಾನ ಮಾಡಲು ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ.
MUST READ : Dina Bhavishya : ದಿನ ಭವಿಷ್ಯ 21 ಮಾರ್ಚ್ 2026..

ಮೃತ ಯುವಕನನ್ನು ಬುದ್ದಿನ್ನಿ ಗ್ರಾಮದ ನಿವಾಸಿ 20 ವರ್ಷದ ಗಂಗಾಧರ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಗ್ರಾಮಸ್ಥರು ನಿರಂತರ ಶೋಧ ಕಾರ್ಯ ನಡೆಸಿದ್ದು, ನಂತರ ನಾಗೋಲಿ ಗ್ರಾಮದ ಬಳಿ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆಯಲ್ಲಿ ಮುಳುಗಿ ಮತ್ತೊಬ್ಬ ಯುವಕ ದುರ್ಮರಣ
ಇನ್ನೊಂದು ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಗೋವಿನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯುಗಾದಿ ಹಬ್ಬದ ಕರಿ ಹಿನ್ನೆಲೆ ಹೋಳಿ ಆಟವಾಡಿದ ಬಳಿಕ ಸ್ನಾನ ಮಾಡಲು ಕೆರೆಗೆ ತೆರಳಿದ್ದ ಯುವಕರು ಈ ವೇಳೆ 30 ವರ್ಷದ ಗೋವಿಂದರಾಜು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಗ್ರಾಮಸ್ಥರು ಮತ್ತು ಪೊಲೀಸರು ಸೇರಿ ಶೋಧ ಕಾರ್ಯ ನಡೆಸಿ ಯುವಕನ ಶವವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH : PAVAGADA | ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇರುವಾಗ್ಲೇ ಕಚೇರಿಯಲ್ಲೇ ಅಧಿಕಾರಿ ಸೂ**ಡ್ |




