Bengaluru : ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ.

ಲಾರಿ ಹರಿದು ಪುಟ್ಟ ಬಾಲಕಿ ದಾರುಣ ಅಂತ್ಯ ಕಂಡಿರುವ ದುರ್ಘಟನೆ Bengaluru ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.
ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಘಟನೆ
ನಿಶಿಕಾ (4) ಮೃತ ಬಾಲಕಿ. ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ.
READ THIS : RCB ಟಿಕೆಟ್ ಬುಕ್ ಮಾಡೋದು ಹೇಗೆ? ಒಂದು ಟಿಕೆಟ್ನ ಬೆಲೆ ಎಷ್ಟು..?

ಪ್ರಕರಣ ದಾಖಲು
ಇನ್ನು ಅಪಘಾತದ ಪರಿಣಾಮ ಹೆತ್ತ ತಾಯಿಯ ಎದುರೇ ಬಾಲಕಿ ಉಸಿರು ಚೆಲ್ಲಿದ್ದಾಳೆ. ಘಟನೆ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH : ಕಿಡಿಗೇಡಿಗಳ ಕೃತ್ಯಕ್ಕೆ ರೈತ ಕಂಗಾಲು – ಲಕ್ಷಾಂತರ ಮೌಲ್ಯದ ರಾಗಿ ಬಣವೆ ನಾಶ




