ನಿಂತಿದ್ದ ಕ್ಯಾಂಟರ್ಗೆ Tata Ace ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನೆಡೆದಿದೆ..

ಬೆಂಗಳೂರು ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಕ್ಯಾಂಟರ್ಗೆ Tata Ace ಡಿಕ್ಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ K.R Puram ಪ್ರದೇಶದ ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದಿದೆ.
ಮಾಹಿತಿಯ ಪ್ರಕಾರ, Kolar ಜಿಲ್ಲೆಯಿಂದ ಬೆಂಗಳೂರಿಗೆ ಆಲೂಗಡ್ಡೆ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಪಂಚರ್ ಆಗಿತ್ತು. ಈ ಕಾರಣದಿಂದ ಚಾಲಕ ವಾಹನವನ್ನು ನಿಲ್ಲಿಸಿ ಟೈರ್ ಬದಲಿಸುತ್ತಿದ್ದರು.
MUST READ : Dina Bhavishya : ದಿನ ಭವಿಷ್ಯ 22 ಮಾರ್ಚ್ 2026..

ಇದರ ಮಧ್ಯೆ, ಹಿಂಬದಿಯಿಂದ ವೇಗವಾಗಿ ಬಂದ ಟಾಟಾ ಏಸ್ ವಾಹನ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಘಟನೆಯ ತೀವ್ರತೆಯಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರ ಗುರುತು ಪತ್ತೆ
ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ವೈಟ್ ಫೀಲ್ಡ್ ನಿವಾಸಿಗಳಾದ ಮಣಿಕಂಠ , ಸುರೇಶ್ , ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ K.R Puram Traffic Police ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ?
ಪ್ರಾಥಮಿಕ ತನಿಖೆಯ ಪ್ರಕಾರ, ಈಚರ್ ವಾಹನ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಕಂಡುಬಂದಿದೆ ಎಂದು ಉತ್ತರ ವಿಭಾಗದ ಡಿಸಿಪಿ ನೇಮಗೌಡ ತಿಳಿಸಿದ್ದಾರೆ.
ಇದಲ್ಲದೆ, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
MUST WATCH : ಜಾನುವಾರು ಸಾಗಾಟ ವಿಚಾರಕ್ಕೆ ಇದೆಂಥಾ ದಬ್ಬಾಳಿಕೆ- ಬಜರಂಗ ದಳದವರ ಮೇಲೆ ಹಲ್ಲೆ ಮಾಡಿದ್ರಾ..?




