Murder : ರಾಜಧಾನಿ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಬೆಬ್ಬಿಬಿದ್ದ ಜನ!

ಸಿಲಿಕಾನ್ ಸಿಟಿಯಲ್ಲಿ ಕ್ರಿಮಿನಲ್ಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ Murder ಮಾಡಲಾಗಿದೆ.
ಹಳೆ ದ್ವೇಷಕ್ಕೆ ಯುವಕ ಬಲಿಯಾದ್ನಾ?
ಕೊಲೆಯಾದ ಯುವಕನನ್ನು ಕಿರಣ್ (25) ಎಂದು ಗುರುತಿಸಲಾಗಿದೆ. ಈತ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ಹಿಂದೆ ಹಲವು ಬಾರಿ ಕುಡಿದು ಗಲಾಟೆ ಮಾಡಿಕೊಂಡಿದ್ದ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

READ THIS : ರಾಜ್ಯದಲ್ಲಿ ಮತ್ತೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ!
ಮಾರಕಾಸ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ!
ಪೊಲೀಸ್ ಮೂಲಗಳ ಪ್ರಕಾರ, ಕೊಲೆಗೂ ಮುನ್ನ ಕಿರಣ್ ಕುಡಿದು ಕೆಲವರೊಂದಿಗೆ ಜಗಳವಾಡಿದ್ದನು. ಈ ಗಲಾಟೆ ತಡರಾತ್ರಿ ತನಕ ಮುಂದುವರಿದಿದ್ದು ಇಂದು ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ದುಷ್ಕರ್ಮಿಗಳು ಕಿರಣ್ನನ್ನು ಬೆನ್ನಟ್ಟಿಕೊಂಡು ಹೋಗಿ, ತಲೆಗೆ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ರಸ್ತೆಯಲ್ಲೇ ಕಿರಣ್ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಪ್ರಕರಣ ದಾಖಲು – Murder
ಇನ್ನು ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆ ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
MUST WATCH : ವಾಸಣ್ಣರಿಂದ ಮುಂದುವರೆದ ಅಭಿವೃದ್ಧಿ ಪರ್ವ – ರಸ್ತೆ ಕಾಮಗಾರಿಗಳಿಗೆ ಚಾಲನೆ ಕೊಟ್ಟ ಶಾಸಕ





