
Shamar Joseph Injury : ವೆಸ್ಟ್ ಇಂಡೀಸ್ನ ವೇಗದ ಬೌಲರ್ ಶಮರ್ ಜೋಸೆಫ್ ಗಾಯದ ಕಾರಣ ಭಾರತ ವಿರುದ್ಧ ನಡೆಯುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಕ್ಟೋಬರ್ 2ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗುವ ಈ ಸರಣಿಗೆ ಇದು ವೆಸ್ಟ್ ಇಂಡೀಸ್ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ಶಮರ್ ಜೋಸೆಫ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ತೀವ್ರ ಫಾರ್ಮಿನಲ್ಲಿದ್ದು, 3 ಪಂದ್ಯಗಳಲ್ಲಿ 22 ವಿಕೆಟ್ ಗಳಿಸಿರುವ ಪ್ರಮುಖ ಬೌಲರ್ ಆಗಿದ್ದಾರೆ.
“ಜೋಹಾನ್ ಲೇನ್ ಅವರು ಭಾರತ ವಿರುದ್ದದ ಟೆಸ್ಟ್ ಸರಣಿಯ ವೆಸ್ಟ್ ಇಂಡೀಸ್ ತಂಡದಲ್ಲಿ ಗಾಯಾಳು ಶಮರ್ ಜೋಸೆಫ್ ಅವರ ಸ್ಥಾನವನ್ನು ತುಂಬಿದ್ದಾರೆ. ಗಾಯದ ಕಾರಣ ಶಮರ್ ಜೋಸೆಫ್ ಅವರು ಟೆಸ್ಟ್ ಸರಣಿಯಿಂದ ಹೊರ ನಡೆದಿದ್ದಾರೆ. ಆದರೆ, ಬಾಂಗ್ಲಾದೇಶ ವಿರುದ್ಧದ ಸೀಮಿತ ಓವರ್ಗಳ ಕ್ರಿಕೆಟ್ ಸರಣಿ ಗೂ ಮುನ್ನ ವೇಗಿಯನ್ನು ಮರು ಮೌಲ್ಯಮಾಪನ ಮಾಡಲಾಗುತ್ತದೆ,” ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಜೋಹಾನ್ ಲೇಯ್ನ್ ಅವರು ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 19 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿ ದ್ದಾರೆ. ಇದರಲ್ಲಿ ಅವರು 32 ಇನಿಂಗ್ಸ್ಗಳಲ್ಲಿ ಎರಡು ಅರ್ಧಶತಕಗಳೊಂದಿಗೆ 495 ರನ್ ಗಳಿಸಿದ್ದಾರೆ.




